ಕೋರೋನಾದಿಂದಾಗಿ ತತ್ತರಿಸುತ್ತಿರುವ ಭಾರತವನ್ನು ಮತ್ತೆ ಆರೋಗ್ಯವಂತ ರಾಷ್ಟವನ್ನಾಗಿ ಮಾಡಲು ಸಾಕಷ್ಟು ಹಣದ ಅವಶ್ಯಕತೆ ಇದ್ದು ಇದಕ್ಕೆ ಪ್ರಧಾನಿ ಮೋದಿಯವರು ಕೋವಿಡ್ -19 ಪರಿಹಾರ ನಿಧಿಯನ್ನು ಸ್ಥಾಪಿಸಿ ಕೊರೋನಾ ವೈರಸ್ ವಿರುದ್ಧ ಹೋರಾಡಲು ಕೈಜೋಡಿಸಿ ಎಂದು ಕರೆ ಕೊಟ್ಟಿದ್ದರು. ಈ ಕರೆಗೆ ಸಾಕಷ್ಟು ದಾನಿಗಳು ವಿವಿಧ ರೀತಿಯಲ್ಲಿ ಸಹಾಯ ಹಸ್ತವನ್ನು ಚಾಚಿದ್ದಾರೆ ಅದರಲ್ಲೂ ಕರ್ನಾಟಕದ ಖ್ಯಾತ ಫೌಂಡೇಶನ್ ಕೊರೋನಾ ಸೊಂಕಿತರಿಗೆಂದೇ ಹೊಸ ಆಸ್ಪತ್ರೆಯನ್ನು ನಿರ್ಮಿಸಲು ನೆರವು ನೀಡುತ್ತೇವೆ ಎಂದು ತಿಳಿಸಿದೆ ಅಷ್ಟಕ್ಕೂ ಆ ಫೌಂಡೇಶನ್ ಯಾವುದು ಗೊತ್ತಾ?
ಈ ಗಾಗಲೇ ಸಾಕಷ್ಟು ಸಾಮಾಜಿಕ ಸೇವೆಗಳನ್ನು ಮಾಡಿ ಕೊಂಡು ಬರುತ್ತಿರುವ ಇನ್ಪೋಸಿಸ್ ಫೌಂಡೇಶನ್ ಎಲ್ಲಾ ರೀತಿಯ ತುರ್ತು ಸಂದರ್ಭಗಳಲ್ಲಿ ಸ್ಪಂದಿಸುತ್ತಿ ದೆ. ಇದೀಗ ಕೊರೋನಾ ವಿರುದ್ಧ ಹೋರಾಟ ಮಾಡಲು ಇನ್ಪೋಸಿಸ್ ಫೌಂಡೇಶನ್ ಮುಂದಾಗಿದೆ. ಕೊರೋನ ಸೋಂಕಿತರಿಗೆಂದೇ ಪ್ರತ್ಯೇಕ ಆಸ್ಪತ್ರೆ ಸ್ಥಾಪಿಸಲು ನೆರವು ನೀಡುವುದಾಗಿ ಘೋಷಿಸಿದ ಬಳಿಕ 100 ಕೋಟಿ ರೂ. ನೀಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಇನ್ಫೋಸಿಸ್ ಫೌಂಡೇಶನ್, ಕೊರೋನ ವಿರುದ್ಧ ಹೋರಾಡಲು ಒಟ್ಟು 100 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ 50 ಕೋಟಿ ರೂ. ಪಿಎಂ ಕೇರ್ಸ್ ನಿಧಿಗೆ ವರ್ಗಾಯಿಸಲಾಗುವುದು. ಉಳಿದ ಹಣವನ್ನು ರೋಗಿಗಳ ಚಿಕಿತ್ಸೆಗೆ ಆಸ್ಪತ್ರೆಗಳ ಸಾಮರ್ಥ್ಯ ವಿಸ್ತರಣೆಗೆ ಬಳಸಿಕೊಳ್ಳಲಾಗುತ್ತಿದೆ. ಅಲ್ಲದೆ ವೆಂಟಿಲೇಟರ್, ಪರೀಕ್ಷಾ ಕಿಟ್ ಹಾಗೂ ಪರ್ಸನಲ್ ಪ್ರೋ ಆಕ್ಟಿವ್ ಇಕ್ವಿಪ್ಮೆಂಟ್(ಪಿಪಿಇ)ಗಳಾದ ಮಾಸ್ಕ್ ಸೇರಿದಂತೆ ಇನ್ನಿತರೆ ಪರಿಕರಗಳನ್ನು ಆರೋಗ್ಯ ರಕ್ಷಣೆ ಸಿಬ್ಬಂದಿಗೆ ನೀಡಲು ಮುಂದಾಗಿದೆ.
ಅಲ್ಲದೆ ದುರ್ಬಲ ವರ್ಗದವರಿಗೆ ಆಹಾರ ಮತ್ತು ಪೌಷ್ಠಿಕಾಂಶ ಲಭ್ಯವಾಗುವಂತೆ ಮಾಡಲು ಇದನ್ನು ಬಳಸಿಕೊಳ್ಳಲಾಗುತ್ತದೆ. ಬೆಂಗಳೂರಿನಲ್ಲಿ ಕೊರೋನ ವೈರಸ್ಗೆಂದೇ ಪ್ರತ್ಯೇಕ ಆಸ್ಪತ್ರೆ ಸ್ಥಾಪನೆಗೆ ನೆರವು ನೀಡುವುದಾಗಿ ಘೋಷಿಸಿತ್ತು. ಅಲ್ಲದೆ ದೇಶದ ಮಿಲಿಟರಿ ಮತ್ತು ಸರಕಾರಿ ಆಸ್ಪತ್ರೆಗಳಿಗೆ ವೈದ್ಯಕೀಯ ಮತ್ತು ಪಿಪಿಇ ಸಲಕರಣೆ ನೀಡುವುದಾಗಿ ಘೋಷಿಸಿದೆ.
ಈ ಕುರಿತು ಮಾತನಾಡಿರುವ ಸುಧಾಮೂರ್ತಿ ಅಗತ್ಯವಿರುವ ಎಲ್ಲರಿಗೂ ಪರಿಹಾರ ಸಾಮಗ್ರಿಗಳು ತಲುಪುವಂತೆ ಮಾಡುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಚಿಕಿತ್ಸೆಗೆ ಹಣ ಭರಿಸಲು ಸಾಧ್ಯವಾಗದ ರೋಗಿಗೆ ನಮ್ಮ ಆರೋಗ್ಯ ರಕ್ಷಣೆ ಸಿಬ್ಬಂದಿ ನೆರವಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.
click and follow Indiaherald WhatsApp channel