ಕೊರೊನಾ ವೈರಸ್‌ನ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾಕಷ್ಟು ಮಂದಿ ಪ್ರಾಣವನ್ನು ಕಳೆದುಕೊಡಿದ್ದಾರೆ. ಇದರಿಂದ ದೇಶದಲ್ಲಿ ಲಾಕ್ ಡೌನ್ ಮಾಡಲಾಗಿದೆ. ಈ ನಡುವೆ ಹವಾಮಾನ ಇಲಾಖೆ ಏಪ್ರಿಲ್ ೦೭ರಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತದೆ ಎಂದು ತಿಳಿಸಿದೆ ಇದರಿಂದ ಜನರಲ್ಲಿ ಸ್ವಲ್ಪ ಆತಂಕ ಹೆಚ್ಚಾಗುವಂತೆ ಮಾಡಿದೆ. ಅಷ್ಟಕ್ಕೂ ಮಳೆ ಬೀಳುವುದಕ್ಕೂ ಕೊರೋನಾ ಹರಡುವುದಕ್ಕೂ ಏನು ಸಂಬಧ ಅಂತೀರ ಇಲ್ಲಿದೆ ನೋಡಿ.

 

ವಿಶ್ವದೆಲ್ಲಡೆ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾವಿನ ಸಂಖ್ಯೆಯೂ ಕೂಡ ನಾಗಾ ಲೋಟದಲ್ಲಿ ಬೆಳೆಯುತ್ತಾ ಇದೆ. ಈಗಾಗಲೇ ವಿಶ್ವದಲ್ಲಿ ಸಾವಿನ ಸಂಖ್ಯೆ ಲಕ್ಷದ ಗಡಿ ಮುಟ್ಟಿದ್ದು ಮುಂದಿನ ದಿನದಲ್ಲಿ ಮತ್ತಷ್ಟು ಹೆಚ್ಚಾಗುವ ಸಂಭವಗಳು ಇದೆ ಎಂದು ಕೆಲವು ಅಂಕಿ ಅಂಶಗಳು ತಿಳಿಸಿದೆ.

 

 ಇಷ್ಟು ದಿನಗಳ ಕಾಲ ಕರ್ನಾಟಕದಲ್ಲಿ ಬೇಸಿಗೆಯ ಬಿಸಿಲು ಹೆಚ್ಚಾಗಿದ್ದ ಕಾರಣ  ಕೊರೋನಾ ಸೋಂಕು ಅತೀ ಹೆಚ್ಚಾಗಿ ಹರಡದೆ ಮಂದಗತಿಯಲ್ಲಿ ಇತ್ತು ಆದರೆ ರಾಜ್ಯದಲ್ಲಿ ಭಾರೀ ಮಳೆಯಾಗುತ್ತದೆ ಎಂದು ಹವಮಾನ ಇಲಾಖೆ ಹೇಳಿದೆ. ಹಾಗಾಗಿ ರಾಜ್ಯದಲ್ಲಿ ಮಳೆ ಹೆಚ್ಚಾದರೆ ವಾತಾವರಣ ತಂಪಾಗಿ ಕೊರೋನಾ ವೈರಸ್ ಹರಡುವುದು ಹೆಚ್ಚಾಗುತ್ತದೆ. ಎಂಬ ಭೀತಿಯಲ್ಲಿ ಜನರು ಇದ್ದಾರೆ.

 

ಎಪ್ರಿಲ್ 7  ಮತ್ತು ೮ರಂದು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕನಿಷ್ಠ ೩೫ ಡಿಗ್ರಿ ಸೆಲ್ಸಿಯಸ್ ನಿಂದ ಗರಿಷ್ಠ ೪೦ ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮುಂದಿನ ವಾರ ತಾಪಮಾನ ಹೆಚ್ಚಾಗಲಿದೆ. ಈ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

 

ತಾಪಮಾನದ ನಿರಂತರ ಹೆಚ್ಚಳ, ಆರ್ದ್ರತೆ ಹೆಚ್ಚು ಕಡಿಮೆಯಾಗಿರುವುದರಿಂದ ಏಪ್ರಿಲ್ ೭, ೮ ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

 

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣಕನ್ನಡ, ಉಡುಪಿ, ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಿಕ್ಕಬಳ್ಳಾಪುರ, ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

 

మరింత సమాచారం తెలుసుకోండి: