ರಾಜ್ಯದಲ್ಲಿ ಕೊರೋನಾ ಸೋಂಕು ಪ್ರತಿನಿತ್ಯ ಏರಿಕೆಯಾಗುತ್ತಲೇ ಇದೆ. ಇದರಿಂದಾಗಿ ಜನರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗುತ್ತಿದೆ. ಇದರ ಜೊತೆಗೆ ಕರ್ನಾಟಕದಲ್ಲಿ ಅತೀ ಹೆಚ್ಚು ದಾಖಲಾಗಿರುವುದು ಬೆಂಗಳೂರು ಆಗಿರುವುದರಿಂದ ಜನರಲ್ಲಿ ಭಯದ ಭೀತಿ ಹೆಚ್ಚಾಗಿದೆ. ಈ ಗಾಗಲೇ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಹೆಚ್ಚಿದ್ದ ಏರಿಯಾಗಳನ್ನು ಲಾಕ್ ಡೌನ್ ಮಾಡಲಾಗಿದೆ.

 

ಹೌದು ರಾಜಧಾನಿ ಬೆಂಗಳೂರಿನಲ್ಲಿ ಹಬ್ಬುತ್ತಿರುವ ಕೊರೋನಾ ಸೋಂಕು ತಡೆಗಟ್ಟಲು ಸರ್ಕಾರ ಹರಸಾಹಸ ನಡೆಸುತ್ತಿರುವ ಬೆನ್ನಲ್ಲೇ ನಗರದಲ್ಲಿ ಇಂದು ಮತ್ತೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 249 ಜನರಿಗೆ ಕೋವಿಡ್ 19 ಸೋಂಕು ದೃಢವಾಗಿದೆ.

 

ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9399ಕ್ಕೆ ಏರಿಕೆಯಾಗಿದೆ. ಬೆಂಗಳೂರು ಮಹಾನಗರದಲ್ಲೇ ಒಟ್ಟು 126 ಮಂದಿಗೆ ಸೋಂಕು ಬಂದಿದೆ. 5 ಮಂದಿ ಸಾವನ್ನಪ್ಪಿದ್ದು, ಬೆಂಗಳೂರು ನಗರದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಆದರಲ್ಲೂ 38 ವರ್ಷದ ಮಹಿಳೆ ಸಾವನ್ನಪ್ಪಿರುವುದು ಆತಂಕ ಸೃಷ್ಟಿಸಿದೆ.

 

ಇಂದು ಒಟ್ಟು 50 ಮಂದಿ ಅಂತರಾಜ್ಯ ಪ್ರಯಾಣಿಕರಿದ್ದರೆ, 11 ಮಂದಿ ಅಂತರಾಷ್ಟ್ರೀಯ ಪ್ರಯಾಣಿಕರಿದ್ದಾರೆ. ಬೆಂಗಳೂರು ನಗರ 126, ಕಕಲಬುರಗಿ 27, ವಿಜಯಪುರ 15, ಉಡುಪಿ 14, ದಕ್ಷಿಣ ಕನ್ನಡ 12, ದಾವಣಗೆರೆ 9, ಉತ್ತರ ಕನ್ನಡ ಮತ್ತು ಬಾಗಲಕೋಟೆ ತಲಾ 6, ಬೀದರ್‌ ಮತ್ತು ಚಿಕ್ಕಮಗಳೂರಿನಲ್ಲಿ ತಲಾ 5, ಧಾರವಾಡ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ತಲಾ 4, ರಾಮನಗರ 3, ಚಿತ್ರದುರ್ಗ, ಕೋಲಾರ, ತುಮಕೂರು, ಕೊಡಗಿನಲ್ಲಿ ತಲಾ 2, ಯಾದಗಿರಿ, ಮೈಸೂರು, ಚಿಕ್ಕಬಳ್ಳಾಪುರ , ಗದಗ, ಕೊಪ್ಪಳದಲ್ಲಿ ತಲಾ ಒಬ್ಬರಿಗೆ ಸೋಂಕು ಬಂದಿದೆ.

 

ಅತಿ ಹೆಚ್ಚು ಸೋಂಕು ಬಂದಿರುವ ಬೆಂಗಳೂರಿನಲ್ಲಿ ಯಾರು ಇಂದು ಬಿಡುಗಡೆಯಾಗಿಲ್ಲ. ಅಷ್ಟೇ ಅಲ್ಲದೇ ಅತಿ ಹೆಚ್ಚು ಐಸಿಯುನಲ್ಲಿರುವ (70) ರೋಗಿಗಳ ಸಂಖ್ಯೆಯಲ್ಲೀ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಎಲ್ಲ ಜಿಲ್ಲೆಗಳ ಪೈಕಿ ಅತಿ ಹೆಚ್ಚು ಸಕ್ರಿಯ ಪ್ರಕರಣಗಳು ಬೆಂಗಳೂರಿನಲ್ಲಿದೆ.

 

ಒಟ್ಟು 1,398 ಮಂದಿಗೆ ಸೋಂಕು ಬಂದಿದ್ದು, ಇಲ್ಲಿಯವರೆಗೆ 411 ಮಂದಿ ಮಾತ್ರ ಬಿಡುಗಡೆಯಾಗಿದ್ದಾರೆ. ಒಟ್ಟು 919 ಸಕ್ರಿಯ ಪ್ರಕರಣಗಳಿದ್ದು, 67 ಮಂದಿ ಮೃತಪಟ್ಟಿದ್ದಾರೆ.

 

ಕಲಬುರಗಿಯಲ್ಲಿ 34, ಯಾದಗಿರಿ 24, ದಕ್ಷಿಣ ಕನ್ನಡ 17, ತುಮಕೂರು 8, ಉತ್ತರ ಕನ್ನಡ 7, ಹಾಸನ 6, ಕೊಪ್ಪಳ 4, ವಿಜಯಪುರ 3, ಹಾವೇರಿ 3, ಉಡುಪಿ 2, ಧಾರವಾಡ 2, ಚಿಕ್ಕಬಳ್ಳಾಪುರದಲ್ಲಿ ಒಬ್ಬರು ಬಿಡುಗಡೆಯಾಗಿದ್ದಾರೆ.

ಇಂದು ಐವರು ಸೋಂಕಿತರು ಮರಣ ಹೊಂದಿದ್ದು, ಸೋಂಕಿನ ಕಾರಣದಿಂದ ಮೃತಪಟ್ಟವರ ಸಂಖ್ಯೆ 142 ಕ್ಕೆ ಏರಿಕೆಯಾಗಿದೆ. ನಾಲ್ವರು ಸೋಂಕಿತರು ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.

 

మరింత సమాచారం తెలుసుకోండి: