ಕೊರೋನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಲೇ. ಪ್ರತಿನಿತ್ಯವೂ ಸಹ ಎರಡು ಸಾವಿರದ ಗಡಿಯನ್ನು ಮುಟ್ಟುತ್ತಿದೆ. ಅದರಲ್ಲೂ ರಾಜ್ಯರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಪ್ರತಿನಿತ್ಯವೂ ಕೂಡ ಸಾವಿರದ ಗಡಿಯನ್ನು ತಲುಪುತ್ತಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ರಾಜ್ಯ ಸರ್ಕಾರದಿಂದ ಜುಲೈ 14ರಿಂದ ಒಂದು ವಾರಗಳ ಕಾಲ ಬೆಂಗಳೂರನ್ನು ಲಾಕ್ ಡೌನ್ ಮಾಡಲು ನಿರ್ಧರಿಸಿದೆ. ಅದರಂತೆ ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಕೂಡ ಕೊರೋನಾ ಹೆಚ್ಚಾಗುತ್ತಿರುವ ಕಾರಣ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡಬಹುದಾದಂತ ಚರ್ಚೆಗಳು ನಡೆಯುತ್ತಿವೆ. ಅಷ್ಟಕ್ಕೂ ಯಾವ ಯಾವ ಜಿಲ್ಲೆಗಳನ್ನು ಲಾಕ್ ಡೌನ್ ಮಾಡಬಹುದು ಗೊತ್ತಾ,,? ಇಲ್ಲಿದೆ ಉತ್ತರ

 

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮಂಗಳವಾರದಿಂದ ಜಾರಿಗೆ ಬರುವಂತೆ ಒಂದು ವಾರಗಳ ಕಾಲ ಸಂಪೂರ್ಣವಾಗಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಮೂಲಕ ಕೊರೋನಾ ಸೋಂಕು ನಿಯಂತ್ರಣಕ್ಕೆ ಸಿಎಂ ಯಡಿಯೂರಪ್ಪ ನೇತೃತ್ಚದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

 

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೂಡ ಕೊರೊನಾ ಮಹಾಸ್ಪೋಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂತಹ ಜಿಲ್ಲೆಗಳನ್ನು ಸಂಪೂರ್ಣ ಬಂದ್ ಮಾಡುವ ಕುರಿತು ಕೂಡ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈಗಾಗಲೇ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವಂತೆ ಸಾರ್ವಜನಿಕರು ಸೇರಿದಂತೆ ಜನಪ್ರತಿನಿಧಿಗಳು ಸಿಎಂ ಅವರನ್ನು ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ.ಇದರ ನಡುವೆ ಇಡೀ ಕರ್ನಾಟಕವನ್ನು ಬಂದ್ ಮಾಡಲಾಗುತ್ತದೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಮಹಾಮಾರಿ ಕೊರೊನಾ ಸೋಂಕು ನಿಯಂತ್ರಣ ತಪ್ಪಿದರ ಹಿನ್ನೆಲೆ ಇಡೀ ಕರ್ನಾಟಕ ಮತ್ತೆ ಬಂದ್ ಆಗಲಿದೆಯಾ ಎಂಬ ಪ್ರಶ್ನೆ ಕಾಡುತ್ತಿದೆ. 20-25 ಕೇಸ್ ಇದ್ದಾಗ ಬಂದ್ ಮಾಡಿದ್ದ ಸರ್ಕಾರ, ಇದೀಗ 20-25 ಸಾವಿರ ಕೊರೊನಾ ಕೇಸ್ ಇರುವಾಗ ಕರ್ನಾಟಕವನ್ನು ಮತ್ತೆ ಬಂದ್ ಮಾಡಲಿದೆಯಾ ಎಂಬ ಪ್ರಶ್ನೆ ಕಾಡುತ್ತಿದೆ.

 

ನಾಳೆ ಬೆಳಿಗ್ಗೆ 11 ಗಂಟೆಗೆ ಸೋಂಕು ಹೆಚ್ಚಾದಂತ ರಾಜ್ಯದ ಕಲಬುರ್ಗಿ, ಮೈಸೂರು, ಮಂಗಳೂರು, ಗದಗ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ ಮತ್ತು ರಾಯಚೂರು ಸೇರಿದ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ವೀಡಿಯೋ ಕಾನ್ಫೆರೆನ್ಸ್ ಕರೆದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜಿಲ್ಲಾವಾರು ಮಟ್ಟದಲ್ಲಿ ಕೊರೋನಾ ನಿಯಂತ್ರಣದ ಕ್ರಮಗಳನ್ನು ಕುರಿತಂತೆ ಚರ್ಚೆ ನಡೆಸಲಿದ್ದಾರೆ. ಈ ಬಳಿಕ ಸಂಜೆ ಇತರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೂ ವೀಡಿಯೋ ಕಾನ್ಫೆರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ. ಬಳಿಕ ರಾಜ್ಯದ ಲಾಕ್ ಡೌನ್ ಭವಿಷ್ಯ ನಿರ್ಧಾರವಾಗಲಿದೆ.

 

మరింత సమాచారం తెలుసుకోండి: