ಶೋಭಾ ಕರಂದ್ಲಾಜೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅಸಹ್ಯವಾಗಿ ಮಾತನಾಡಿದ ಕೂಡಲೇ ಕಾಂಗ್ರೆಸ್ ಪಕ್ಷದ ನಾಯಕರು ಶೋಭಾ ಕರಂದ್ಲಾಜೆ ಅವರಿಗೆ ತಕ್ಕ ತಿರುಗೇಟು ನೀಡೋಕೆ ಆರಂಭಿಸಿದ್ದಾರೆ. ಇದೀಗ ಸಚಿವ ಯು.ಟಿ.ಖಾದರ್ ಕೂಡ ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಹೌದು, ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಯು.ಟಿ. ಖಾದರ್, ಸಿದ್ದರಾಮಯ್ಯ ಅವರ ಬಗ್ಗೆ ಶೋಭಾ ಕರಂದ್ಲಾಜೆ ಹೇಳಿರುವುದು ಸರಿಯಲ್ಲ. ಸಿದ್ದರಾಮಯ್ಯ ಹೆಸರು ಹೇಳಲಿಕ್ಕೂ ಕೂಡ ಶೋಭಾ ಅವರಿಗೆ ಯೋಗ್ಯತೆ ಇಲ್ಲ. ಬಿಜೆಪಿ ಸಹೋದರರಿಗೆ ಹೇಳುವುದೇನೆಂದರೆ, ದಯವಿಟ್ಟು ನಮ್ಮಪಕ್ಷದಲ್ಲಿ ಗೊಂದಲ ಸೃಷ್ಟಿಸಬೇಡಿ. ನಮ್ಮ ಮೈತ್ರಿಯನ್ನು ಯಾರೂ ಬೇರ್ಪಡಿಸಲು ಸಾಧ್ಯವಿಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ತಕ್ಕ ತಿರುಗೇಟು ನೀಡಿದ್ದಾರೆ.
ಇನ್ನು ರಾಜ್ಯದಲ್ಲಿ ಮತ್ತೆ ಸಿದ್ದು ಸಿಎಂ ಆಗುತ್ತಾರೆ ಅನ್ನೋ ಚರ್ಚೆಗಳು ಕೇಳಿ ಬರುತ್ತಿವೆ. ಅದರ ಬಗ್ಗೆ ಕೇಳಿದ ಪ್ರಶ್ನೆಗೆ ಯು.ಟಿ.ಖಾದರ್ ಸರಿಯಾದ ನುಣುಚಿಕೊಳ್ಳುವ ಪ್ರಯತ್ನ ಮಾಡಿದರು. ರಾಜ್ಯದಲ್ಲಿ ಸಿಎಂ ಸ್ಥಾನದ ಬಗ್ಗೆ ನಡೆಯುತ್ತಿರುವ ಚರ್ಚೆ ವಿಚಾರವಾಗಿ ನಾನು ಏನೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ. jಜೊತೆಗೆ ಎಲ್ಲ ವಿಚಾರದಲ್ಲೂ ನಾವೆಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಮೈತ್ರಿ ಸರ್ಕಾರಕ್ಕೆ ಏನೂ ಆಗಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
click and follow Indiaherald WhatsApp channel