ಐತಿಹಾಸಿಕ ಕಥೆಯುಳ್ಳ ಸಿನಿಮಾ 'ಗಂಡುಗಲಿ ಮದಕರಿ ನಾಯಕ'. ಈ ಚಿತ್ರದಲ್ಲಿ ದರ್ಶನ್ ಅಭಿನಯಿಸುತ್ತಿರೋದು ಎಲ್ಲರಿಗೂ ಗೊತ್ತೇ ಇದೆ. ಈ ಚಿತ್ರವನ್ನು ರಾಕ್ ಲೈನ್ ವೆಂಕಟೇಶ ಅವರು ನಿರ್ಮಿಸುತ್ತಿದ್ದಾರೆ. ಈ ಸಿನಿಮಾ ಆಗಸ್ಟ್ ನಲ್ಲಿ ರಾಜಸ್ಥಾನದಲ್ಲಿ ಶೂಟಿಂಗ್ ಆರಂಭಿಸಲಿದೆ.
ಈ ಐತಿಹಾಸಿಕ ಸಿನಿಮಾ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ. ಈ ಚಿತ್ರಕ್ಕಾಗಿ ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಚಿತ್ರದ ವಸ್ತ್ರ ವಿನ್ಯಾಸಕರ ಕೆಲ ಇನ್ನೂ ಭಾಕಿ ಇದೆ ಎನ್ನಲಾಗಿದೆ. ಹೀಗಾಗಿ ಕೊಂಚ ತಡವಾಗುತ್ತಿದೆ.
ಸಂಗೊಳ್ಳಿ ರಾಯಣ್ಣನಾಗಿ ಮಿಂಚಿದ್ದ ದರ್ಶನ್ ಇದೀಗ ಗಂಡುಗಲಿ ಮದಕರಿನಾಯಕ ಆಗುತ್ತಿದ್ದಾರೆ. ಹೀಗಾಗಿ ಚಿತ್ರದ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಸದ್ಯಕ್ಕೆ ದರ್ಶನ್ ರಾಬರ್ಟ್ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ ಈ ಸಿನಿಮಾ ಆಗಸ್ಡ್ ನಲ್ಲಿ ಶೂಟಿಂಗ್ ಆರಂಭವಾಗಲಿದೆ. ಚಿತ್ರಕ್ಕೆ ಹಂಸಲೇಖಾ ಸಂಗೀತವಿದೆ.
click and follow Indiaherald WhatsApp channel