ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ಚಂಡರಕಿ ಗ್ರಾಮ ತಲುಪಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾತ್ರಿ ಹಳ್ಳಿಗೆ ಬಂದು ಅರ್ಜಿ ಸ್ವೀಕರಿಸಿ ಹೋಗುವ ಕಾರ್ಯಕ್ರಮ ಗ್ರಾಮ ವಾಸ್ತವ್ಯ ಅಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಚಂಡರಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಉದ್ಘಾಟಿಸಿ ಮಾತನಾಡಿದ ಅವರು, ಹಳ್ಳಿಗಳಿಗೆ ಮೂಲ ಸೌಕರ್ಯ ಸಿಕ್ಕಾಗ ನಿಜವಾದ ಸ್ವಾತಂತ್ರ್ಯ ಎಂದು ಗಾಂಧೀಜಿ ಹೇಳಿದ್ದಾರೆ. ಮಹಾತ್ಮ ಗಾಂಧೀಜಿ ಅವರ ಕಲ್ಪನೆ ಇಟ್ಟುಕೊಂಡು ನಾನು ಕಾರ್ಯಕ್ರಮ ಮಾಡುತ್ತೇನೆ ಎಂದರು.
12 ವರ್ಷಗಳ ಹಿಂದೆ ಗ್ರಾಮ ವಾಸ್ತವ್ಯ ಮಾಡೋ ಮೂಲಕ ಹಳ್ಳಿಗಳ ಅಭಿವೃದ್ಧಿಗೆ ಪ್ರಯತ್ನ ಮಾಡಿದ್ದೇನೆ. ಅಲ್ಲದ ಹಲವಾರು ಕಾರ್ಯಕ್ರಮಗಳಿಂದ ಅರಿವು ಮೂಡಿಸಿಕೊಂಡಿದ್ದೇನೆ. ಜಿಲ್ಲೆಯ ಸಮಸ್ಯೆ ಕುರಿತು ಇಲ್ಲಿಯೇ ಪರಿಹಾರ ನೀಡುತ್ತೇನೆ ಎಂದರು.
click and follow Indiaherald WhatsApp channel