ಈ ಬಾರಿ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ ಎಂದು ಹೇಳಿದವರು ಗೋಲ್ಡನ್ ಸ್ಟಾರ್ ಗಣೇಶ್. ಹೌದು, ಮುಬರುವ ಜುಲೈ ೨ ರಂದು ಗೋಲ್ಡನ್ ಸ್ಟಾರ್ ಅವರ ಹುಟ್ಟುಹಬ್ಬ. ಅವರ ಹುಟ್ಟುಹಬ್ಬಕ್ಕೆ ರಾಜ್ಯದೆಲ್ಲೆಡೆಯಿಂದ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ಹೀರೋ ಮನೆಯ ಮುಂದೆ ನಿಂತಿರುತ್ತಾರೆ. ಗಣೇಶ್ ಕೈಯಿಂದ ಕೇಕ್ ಕತ್ತರಿಸಿ, ತಿಂದು ಸಂಭ್ರಮಿಸುವುದು ವಾಡಿಕೆ.
ಆದರೆ ಈ ಭಾರಿ ಗೋಲ್ಡನ್ ಸ್ಟಾರ್ ಅವರು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಇದಕ್ಕೆ ಕಾರಣ ಏನು ಗೊತ್ತ? ಇದಕ್ಕೆ ಗಣೇಶ್ ಅವರೇ ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದಿದ್ದಾರೆ. ಕೆಲವು ತಿಂಗಳ ಹಿಂದೆಯಷ್ಟೇ ತಂದೆಯವರನ್ನು ಕಳೆದುಕೊಂಡಿದ್ದೇನೆ. ಅಲ್ಲದೆ, ಈ ಸಂದರ್ಭದಲ್ಲಿ ಮನೆಯಲ್ಲಿ ನಾವ್ಯಾರೂ ಇರುವುದಿಲ್ಲ. ಆದ್ದರಿಂದ ದೂರದ ಊರುಗಳಿಂದ ಬಂದು ಕಾಯುವ ಪ್ರಯತ್ನ ಮಾಡಬೇಡಿ ಎಂದು ಅಭಿಮಾನಿಗಳಲ್ಲಿ ಹೇಳಿದ್ದಾರೆ.
ಅಷ್ಟೇ ಅಲ್ಲದೇ, ನನ್ನ ಹುಟ್ಟುಹಬ್ಬ ಆಚರಿಸಲು ದೂರದಿಂದ ಹಲವು ಸಿದ್ಧತೆಗಳೊಂದಿಗೆ ಬಂದು ಶುಭಕೋರಿ ಸಂಭ್ರಮಿಸುವ ನಿಮ್ಮ ಪ್ರೀತಿಗೆ ನಾನೆಂದೂ ಋಣಿ ಎಂದು ಅಭಿಮಾನಿಗಳಿಗೆ ಹೀಗೆ ಹೇಳಿದ್ದಾರೆ. ಒಟ್ಟಿನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಈ ಭಾರಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳದೇ ಇರುವುದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
click and follow Indiaherald WhatsApp channel