ಮೈತ್ರಿ ಸರ್ಕಾರದ ಆಯಸ್ಸು ಅದೆಷ್ಟು ತಿಂಗಳೋ ಗೊತ್ತಿಲ್ಲ. ಸಿಎಂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಯೇ ಇದೀಗ ಜೆಡಿಎಸ್ ಕಾರ್ಯಕರ್ತರಿಗೆ 'ರಾಜ್ಯ ವಿಧಾನಸಭಾ ಚುನಾವಣೆಗೆ ಈಗಿಂದಿಗಲೇ ಸಿದ್ಧರಾಗಿ' ಎಂದು ಹೇಳಿರುವ ವಿಡಿಯೊ ಇದೀಗ ವೈರಲ್ ಆಗಿದೆ.
ನಿಖಿಲ್ ಅವರ ಮಾತುಗಳನ್ನು ಕೇಳುತ್ತಿದ್ದರೆ ರಾಜ್ಯದಲ್ಲಿ ಮತ್ತೊಮ್ಮೆ ಆದಷ್ಟು ಬೇಗ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಕಂಡು ಬರುತ್ತಿದೆ. ಅಲ್ಲದೇ ಮುಖ್ಯಮಂತ್ರಿಯೂ ರಾಜ್ಯದ ಜನರ ಕಡೆಗೆ ಗಮನ ಹರಿಸುವುದು ಬಿಟ್ಟು ಕುರ್ಚಿ ಉಳಿಸಿಕೊಳ್ಳಲು ಹಾಗೂ ಸರ್ಕಾರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.
(ಕುಮಾರಸ್ವಾಮಿ, ಮುಖ್ಯಮಂತ್ರಿ)
ಹೀಗಾಗಿ ಈ ಸಂದರ್ಭದಲ್ಲಿ ನಿಖಿಲ್ ಮಾತುಗಳು ನಿಜಕ್ಕೂ ಭವಿಷ್ಯವನ್ನು ನುಡಿಯುತ್ತಿವೆಯಾ ಎನ್ನುವ ಪ್ರಶ್ನೆಗಳನ್ನು ಹುಟ್ಟು ಹಾಕುತ್ತವೆ.
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು, ಮಂಡ್ಯದಿಂದ ಸ್ಪರ್ಧಿಸಿ ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ಸೋಲು ಕಂಡಿದ್ದರು. ಹೀಗಾಗಿ ಮುಂದಿನ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರಬಹುದು ಅನ್ನೋ ಮಾತುಗಳೂ ಕೇಳಿ ಬರುತ್ತಿವೆ.
click and follow Indiaherald WhatsApp channel