ದೋಸ್ತಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮ ಇದೀಗ ಮುಂದೂಡಲಾಗಿದೆ. ಜೂನ್ 12 ರಂದೇ ಸಂಪುಟ ವಿಸ್ತರಣೆ ಆಗಬೇಕಿತ್ತು. ಆದರೆ ಸಾಹಿತಿ ಗಿರೀಶ್ ಕಾರ್ನಾಡ್ ಅವರ ನಿಧನದ ಹಿನ್ನೆಲೆ ಶುಕ್ರವಾರಕ್ಕೆ ಮುಂದೂಡಲಾಗಿದೆ.
ಹೌದು, ದೋಸ್ತಿ ಸರ್ಕಾರದ ವಿಸ್ತರಣೆ ಕಾರ್ಯಕ್ರಮ ಜೂನ್ 14 ರಂದು ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ರಾಜಭವನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮೂವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಖಾಲಿ ಇರುವ ಮೂರು ಸ್ಥಾನಗಳಿಗೆ ಭರ್ತಿ ಮಾಡೋಕೆ ಇದೀಗ ನಿರ್ಧರಿಸಲಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಒಬ್ಬರು ಹಾಗೂ ಪಕ್ಷೇತರರು ಇಬ್ಬರು ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
click and follow Indiaherald WhatsApp channel