ಶಾಸಕ ಎಚ್.ವಿಶ್ವನಾಥ್ ಅವರು ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದು, ಹೀಗಾಗಿ ಯಾರೇ ಹೇಳಿದರೂ ಮತ್ತೆ ಆ ಸ್ಥಾನದಲ್ಲಿ ಮುಂದುವರೆಯುವುದಿಲ್ಲ ಎಂದಿದ್ದಾರೆ. ಈ ಮೂಲಕ ಮತ್ತೆ ಎಚ್. ವಿಶ್ವನಾಥ್ ಅವರೇ ಜೆಡಿಎಸ್ ರಾಜ್ಯಾಧ್ಯಕ್ಷ ಆಗ್ತಾರೆ ಅನ್ನೋ ವಿಷಯಕ್ಕೆ ತೆರೆ ಎಳೆದಿದ್ದಾರೆ.
ಹೌದು, ಎಚ್.ವಿಶ್ವನಾಥ್ ಈ ಬಾರಿ ದೃಢ ನಿರ್ಧಾರದಿಂದಲೇ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ರಾಜೀನಾಮೆಯನ್ನು ವಾಪಾಸ್ ಪಡೆಯುವ ಪ್ರಮಯವೇ ಇಲ್ಲ ಎನ್ನಲಾಗಿದೆ.
ಅಲ್ಲದೇ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಯಾವುದೇ ಮುಸ್ಲಿಂ ಮಂತ್ರಿ ಇಲ್ಲ. ಹೀಗಾಗಿ ಸಂಪುಟ ವಿಸ್ತರಣೆಯಲ್ಲಿ ಜೆಡಿಎಸ್ ವತಿಯಿಂದ ಮುಸ್ಲಿಂರೊಬ್ಬರನ್ನು ಸಚಿವರನ್ನಾಗಿ ಮಾಡಬೇಕು ಎಂದು ಎಚ್. ವಿಶ್ವನಾಥ್ ಅವರು ಒತ್ತಾಯಿಸಿದ್ದಾರೆ.
ಜೆಡಿಎಸ್ ಪಾಲಿನ ಎರಡು ಸಚಿವ ಸ್ಥಾನಗಳು ಖಾಲಿ ಇವೆ. ಹೀಗಾಗಿ ಒಂದನ್ನಾದರೂ ಮುಸ್ಲಿಂ ಶಾಸಕರಿಗೆ ನೀಡಬೇಕು ಎಂದು ಎಚ್.ವಿಶ್ವನಾಥ್ ಹೇಳಿದ್ದಾರೆ. ಈ ಬಗ್ಗೆ ದೇವೇಗೌಡ ಮತ್ತು ಕುಮಾರಸ್ವಾಮಿ ಚರ್ಚೆ ನಡೆಸಲಿದ್ದಾರೆ. ಇಬ್ಬರ ಒಪ್ಪಿಗೆ ಸಿಕ್ಕರೆ ಮುಸ್ಲಿಂ ಜನಪ್ರತಿಬಿಧಿಯೊಬ್ಬ ಸಚಿವನಾಗಬಹುದು.
click and follow Indiaherald WhatsApp channel