ರಾಜ್ಯದಲ್ಲಿ ತೀವ್ರ ವಿವಾದವನ್ನು ಹುಟ್ಟು ಹಾಕಿರುವುದು ಜಿಂದಾಲ್. ಹೌದು, ಜಿಂದಾಲ್ ವಿವಾದದ ಕುರಿತು ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಪ್ರತಿಪಕ್ಷ ಅಷ್ಟೇ ಅಲ್ಲದೆ ಕಾಂಗ್ರೆಸ್ ಸರ್ಕಾರದಲ್ಲಿಯೂ ಜಿಂದಾಲ್ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.
ವಿವಾದ ದೊಡ್ಡ ಮಟ್ಟಕ್ಕೆ ಹೋಗುತ್ತಿದ್ದಂತೆಯೇ ಸಿಎಂ ಕುಮಾರಸ್ವಾಮಿ ಅವರು ಇದೇ ಮೊದಲ ಬಾರಿಗೆ ಜಿಂದಾಲ್ ಕುರಿತು ಟ್ವೀಟ್ ಮಾಡಿದ್ದಾರೆ. ಅವರು ಮಾಡಿದ ಟ್ವೀಟ್ ಏನು ಅನ್ನೋದು ಇಲ್ಲಿದೆ.
'ಜಿಂದಾಲ್ ಗೆ ಭೂಮಿ ಮಾರಾಟದ ಕುರಿತು ಇಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಹಾಗೂ ಕೈಗಾರಿಕಾ ಬಸಚಿವ ಕೆ.ಜೆ.ಜಾರ್ಜ್ ಅವರೊಂದಿಗೆ ಚರ್ಚಿಸಿದ್ದೇನೆ. ಈ ವಿಷಯವನ್ನು ಮರುಪರಿಶೀಲನೆ ಮಾಡಿ ಸಂಪುಟ ಸಭೆಯಲ್ಲಿ ಪುನಃ ಮಂಡಿಸುವಂತೆ ಸೂಚಿಸಿದ್ದೇನೆ' ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
click and follow Indiaherald WhatsApp channel