ಈ ಹಿಂದೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಎಚ್. ವಿಶ್ವನಾಥ್ ಅವರು ರಾಜೀನಾಮೆ ನೀಡಿದ ಬಳಿಕ ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಮೈತ್ರಿ ಸರ್ಕಾರದ ಸಚಿವ ಸಂಪುಟದಲ್ಲಿ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಅವರು ಹೇಳಿದ್ದಾರೆ.
ಹೌದು, ಇತ್ತೀಚೆಗಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎಚ್.ವಿಶ್ವನಾಥ್ ಅವರು ಯಾರೇ ಹೇಳಿದರೂ ತಮ್ಮ ರಾಜೀನಾಮೆಯನ್ನು ಹಿಂಪಡೆಯಲಿಲ್ಲ. ಆದರೆ ಇದೀಗ ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎನ್ನುವ ಮೂಲಕ ಮತ್ತೆ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಬೇಕು. ಒಂದು ವೇಳೆ ಸಚಿವ ಸ್ಥಾನ ನೀಡಿದರೆ ನಾನು ಖುಷಿಯಿಂದ ಹಾಗೂ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಆದರೆ ಸಚಿವ ಸ್ಥಾನ ನೀಡುವುದು ಬಿಡುವುದು ಮುಖ್ಯ ಮಂತ್ರಿಗಳಿಗೆ ಬಿಟ್ಟಿದ್ದು ಎಂದು ಕೊನೆಗೆ ಸೇರಿಸಿದ್ದಾರೆ.
ಅಲ್ಲದೇ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಪುನಃ ಪಡೆಯುವುದಿಲ್ಲ ಎಂದು ಹೇಳಿರುವ ಅವರು, ಜೆಡಿಎಸ್ ಪಕ್ಷದಲ್ಲಿ ಸಮರ್ಥ ನಾಯಕರಿದ್ದಾರೆ. ಅಲ್ಕದೇ ಯುವಜನತೆಗೆ ಅವಕಾಶ ನೀಡಿ ಎಂದು ಪಕ್ಷದ ಮುಖಂಡರಿಗೆ ಹೇಳಿದ್ದೇನೆ ಎಂದರು.
click and follow Indiaherald WhatsApp channel