ರಾಜ್ಯಾದ್ಯಂತ ಸಮ್ಮಿಶ್ರ ಸರ್ಕಾರದ ವಿರುದ್ಧ ಉಗ್ರ ಹೋರಾಟ ಕೈಗೊಳ್ಳುವುದಾಗಿ ಬಿಜೆಪಿಯ ಯುವಪಡೆ ಎಚ್ಚರಿಕೆ ನೀಡಿದೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ, ನಗರದ ಗಾಂಧಿ ಪ್ರತಿಮರ ಬಳಿ ಯುವ ಮೋರ್ಚಾ ಪ್ರತಿಭಟನೆ ನಡೆಸಿತು.
ಈ ಪ್ರತಿಭಟನೆಯಲ್ಲಿ ಸಮ್ಮಿಶ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಜೊತೆಗೆ ಕೆಲವು ಪ್ರಮುಖ ವಿಷಯಗಳನ್ನು ಮುಂದಿಡಲಾಯಿತು. ಬಳ್ಳಾರಿಯ ಜಿಂದಾಲ್ ಕಂಪೆನಿಗೆ ಮಾರಾಟ ಮಾಡಿರುವ ಜಮೀನನ್ನು ವಾಪಾಸ್ ಪಡೆಯುವುದು, ಐಎಂಎ ಹಗರಣವನ್ನು ಸಿಬಿಐಗೆ ವಹಿಸುವುದು ಹಾಗೂ ರಾಜ್ಯರ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದು ಈ ಎಲ್ಲವನ್ನೂ ಸಮ್ಮಿಶ್ರ ಸರ್ಕಾರ ಕೂಡಲೇ ಮಾಡಬೇಕು ಎಂದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ಆರ್. ಅಶೋಕ್ ಅವರು, ಬಿಜೆಪಿ ಸರ್ಕಾರದ ಅವಧಿ ಇದ್ದಾಗ ಅಕ್ರಮ ಗಣಿಗಾರಿಕೆ ವಿರುದ್ಧ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದ ಸಿದ್ದರಾಮಯ್ಯ ಅವರು ಈಗೇಕೆ ಮೌನವಾಗಿ ಇದ್ದಾರೆ ಎಂದು ಪ್ರಶ್ನಿಸಿದರು.
click and follow Indiaherald WhatsApp channel