ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶನಿವಾರ ಬೆಳಿಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸೌಹಾರ್ಧಯುತವಾಗಿ ಭೇಟಿ ಆಗಿದ್ದಾರೆ. ಜೊತೆಗೆ ಮೋದಿ ಅವರು ಪುನರ್ ಆಯ್ಕೆ ಆಗಿರೋದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. 

 

ಪ್ರಧಾನಿ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ತಲೇದೋರಿರುವ ಬರ ಪರಿಸ್ಥಿತಿ, ನರೇಗಾ ಬಾಕಿ ಅನುದಾನ, ಹಾಗೂ ಸಾಲಮನ್ನಾ ಯೋಜನೆ ಯಶಸ್ವಿ ಅನುದಾನದ ಕುರಿತು ಚರ್ಚೆ ನಡೆಸಿದರು.

 

ಇದರ ಜೊತೆಗೆ ರಾಜ್ಯದಲ್ಲಿನ ಬರಗಾಲ ಪರಿಸ್ಥಿತಿಗಳನ್ನು ಪ್ರಧಾನಿಗೆ ವಿವರಿಸಿದರು. ಕೇಂದ್ರ ಸರ್ಕಾರ ರಾಜ್ಯದ ಸಹಾಯಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು. ರಾಜ್ಯದಲ್ಲಿ ನರೇಗಾ ಯೋಜನೆ ಯಶಸ್ವಿಯಾಗಿ ಅನುಷ್ಠಾನ ಆಗಿದ್ದು, ಈ ಯೋಜನೆ ಅಡಿ ಬಾಕಿ ಇರುವ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.

 

మరింత సమాచారం తెలుసుకోండి: