ವಿಶ್ವಾಸ ಮತಯಾಚನೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರ ಪತನವಾಗಿದೆ. ಇದು ಬಿಜೆಪಿಯವರಲ್ಲಿ ಸಹಜವಾಗಿಯೇ ಹುಮ್ಮಸ್ಸನ್ನು ಉಂಟು ಮಾಡಿದೆ. ಅಲ್ಲದೇ ಸ್ಪೀಕರ್ ರಮೇಶ್ ಕುಮಾರ್ ಅವರು ವಾರದೊಳಗೆ ಹೊಸ ಸರ್ಕಾರ ರಚನೆ ಆಗಬೇಕು ಎಂದು ತಿಳಿಸಿದ್ದಾರೆ. 


ಇನ್ನೂ ಸ್ಪೀಕರ್ ರಮೇಶ್ ಕುಮಾರ್ ಅವರು ಸಂಜೆ 7:30ಕ್ಕೆ ದಿಢೀರನೆ ಸುದ್ದಿಗೋಷ್ಟಿ ನಡೆಸಿದ್ದಾರೆ. ಅತೃಪ್ತ ಶಾಸಕರ ಅನಹರ್ತೆ ಬಗ್ಗೆ ಸಭೆ ನಡೆಸಿದ್ದಾರೆ. ಶಾಸಕರಾದ ಮಹೇಶ್ ಕುಮಟಳ್ಳಿ, ರಮೇಶ್ ಜಾರಕಿಹೊಳಿ, ಆರ್.ಶಂಕರ್ ಅವರನ್ನು ಅನರ್ಹ ಮಾಡಬೇಖು ಎನ್ನುವ ಬಗ್ಗೆ ಸ್ಪೀಕರ್ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.


ರಾಜೀನಾಮೆ ನೀಡಿದ 15 ಶಾಸಕರುಗಳ ಪೈಕಿ ಮೂವರನ್ನು ಅನರ್ಹಗೊಳಿಸಿದ್ದಾರೆಂದು ಹೇಳಲಾಗುತ್ತಿದ್ದು, ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ ಹಾಗೂ ಕಾಂಗ್ರೆಸ್ ಜೊತೆ ವಿಲೀನಗೊಂಡ ಪಕ್ಷೇತರ ಶಾಸಕ ಪಕ್ಷೇತರ ಶಾಸಕ ಆರ್. ಶಂಕರ್ ರನ್ನು ಸ್ಪೀಕರ್ ರಮೇಶ್ ಕುಮಾರ್ ಅವರು ಅನರ್ಹಗೊಳಿಸಿದ್ದಾರೆಂದು ಹೇಳಲಾಗುತ್ತಿದೆ.


మరింత సమాచారం తెలుసుకోండి: