ಗೋಕಾಕ್: ಮಹಾ ಉಪಕದನದ ಫಲಿತಾಂಶ ಪ್ರಕಟವಾಗಿದ್ದು ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ ಭರ್ಜರಿಯಾಗಿ ಗೆದ್ದುಬೀಗಿ ಈಗಾಗಲೇ ಡಿಸಿಎಂ ಪಟ್ಟದ ಮೇಲೆ ಕಣ್ಣು ಬಿದ್ದಿದೆ ಎನ್ನಲಾಗುತ್ತಿದೆ. ಆದರೆ ಅತೃಪ್ತರಲ್ಲಿ  ಆಪ್ತರಾದ ಹೆಚ್. ವಿಶ್ವನಾಥ್ ಮತ್ತು ಎಂಟಿಬಿ ನಾಗರಾಜ್ ಅವರ ಸೋಲಿನ ವಿಚಾರ ಕೇಳಿ ರಮೇಶ್ ಜಾರಕಿಹೊಳಿ ಹೇಳಿದ್ದನ್ನು ಕೇಳಿದ್ರೆ ಶಾಕ್ ಆಗ್ತೀರಾ. ಅವರು ಏನ್ ಹೇಳಿದ್ದಾರೆ ಎಂಬ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ. 
 
 ಬಿಜೆಪಿಯ ನೂತನ ಶಾಸಕರು, ಸೋತ ಅಭ್ಯರ್ಥಿಗಳೆಲ್ಲಾ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ ಸೇರಿ ಚರ್ಚಿಸುತ್ತೇವೆ ಎಂದು ನೂತನ ಶಾಸಕ ರಮೇಶ್ ಜಾರಕಿಹೊಳಿ  ಹೇಳಿದ್ದಾರೆ. ಯಾರಿಗೆ ಯಾವ ಖಾತೆ ಕೊಡಬೇಕು ಎಂಬುದನ್ನು ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದೂ ರಮೇಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ‘ಕಳೆದ ಒಂದೂವರೆ ತಿಂಗಳಿಂದ ನಾವು 18 ರಿಂದ 20 ಶಾಸಕರು ಭೇಟಿಯಾಗಿಲ್ಲ. ಎಂಟಿಬಿ ನಾಗರಾಜ್‌, ಎಚ್‌.ವಿಶ್ವನಾಥ್‌ ಅವರಿಗೆ ಅನ್ಯಾಯವಾಗಿದೆ. ಕೆಲವೊಂದಷ್ಟು ವಿಚಾರಗಳಿವೆ. ಅವುಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ’ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. 
 
ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ರಮೇಶ್‌ ಮನೆಯಲ್ಲಿ ಮಂಗಳವಾರ ಸಂಭ್ರಮಾಚರಣೆ ನಡೆದರೆ, ಸಹೋದರ ಲಖನ್‌ ಗೆಲ್ಲಿಸಲು ಪಣ ತೊಟ್ಟಿದ್ದ ಸತೀಶ್‌ ಜಾರಕಿಹೊಳಿ ಮನೆಯಲ್ಲಿ ಸೋಲಿನ ಪರಾಮರ್ಶೆ ನಡೆದಿತ್ತು. ನಗರದ ಹಿಲ್‌ ಗಾರ್ಡ್‌ನಲ್ಲಿರುವ ತಮ್ಮ ಮನೆಯಲ್ಲಿ ಸತೀಶ್‌ ಜಾರಕಿಹೊಳಿ, ಕಾಂಗ್ರೆಸ್‌ ಕಾರ್ಯಕರ್ತರೊಂದಿಗೆ ಚರ್ಚಿಸಿದರು. ಯಾರೂ ಭಯ ಪಡುವ ಅಗತ್ಯವಿಲ್ಲ. ಎಲ್ಲರೂ ಸೇರಿ ಪಕ್ಷವನ್ನು ಕಟ್ಟೋಣ ಎಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್‌, ‘ಗೋಕಾಕ್‌ನಲ್ಲಿ ನಮ್ಮದೇ ಆದ ವೋಟ್‌ ಬ್ಯಾಂಕ್‌ ಮಾಡಿದ್ದೇವೆ. ಆದರೆ, ರಮೇಶ್‌ ವಿರೋಧಿಸುವವರೂ ಅವರಬೆನ್ನಿಗೆ ನಿಂತಿರೋದ್ರಿಂದಗೆದ್ದಿದ್ದಾರೆ. ಸರಕಾರ ಉಳಿಸಿಕೊಳ್ಳುವ ವಿಚಾರದಲ್ಲಿ ಬಿಜೆಪಿಗೆ ಗೆಲುವಾಗಿದೆ. ಗೋಕಾಕ್ ಉಪಚುನಾವಣೆಯಲ್ಲಿ ಸ್ಥಳೀಯ ವಿಷಯಗಳ ಬಗ್ಗೆ ಜನಗಮನ ಕೊಡಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು. 
 
ಇದೀಗ ಮತ್ತೇ ಎಲ್ಲಾ ಅನರ್ಹ ಶಾಸಕರು ಒಟ್ಟಾಗಿ ಸೇರಲಿದ್ದು ರಮೇಶ್ ಜಾರಕಿಹೊಳಿ ಸೇರಿದಂತೆ ಬಹುತೇಕರು ಯಡಿಯೂರಪ್ಪ ಅವರ ಬಳಿ ಮಾತನಾಡಿ ವಿಶ್ವನಾಥ್, ಎಂಟಿಬಿಗೆ  ಯಾವ ಸ್ಥಾನಮಾನ ಕಲ್ಪಿಸುತ್ತಾರೆ ಎಂಬುದು ಕಾದುನೋಡಬೇಕಾಗಿದೆ.

మరింత సమాచారం తెలుసుకోండి: