ನವದೆಹಲಿ: ಇತ್ತೀಚೆಗೆ ಮುಕ್ತಾಯಗೊಂಡ ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ದಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಹೀನಾಯವಾಗಿ ಸೋತಿದ್ದು, ಇದೀಗ ಕೇಂದ್ರ ಸರ್ಕಾರದ ಗೃಹ ಸಚಿವ ರಾಜಕೀಯ ಚಾಣಕ್ಯ ಅಮಿತ್ ಶಾ ದೆಹಲಿ ಸೋಲಿನ ಕಾರಣ ಬಿಚ್ಚಿಟ್ಟಿದ್ದಾರೆ. ಹೌದು, ಏನದು ಗೊತ್ತಾ!? ಮುಂದೆ ಓದಿ.
ದೆಹಲಿ ಸೋಲಿಗೆ ಕಾರಣ ಬಿಚ್ಚಿಟ್ಟ ಗೃಹ ಸಚಿವ :
ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಸೋಲಿಗೆ ಪಕ್ಷದ ನಿರಾಶಾದಾಯಕ ನಿರ್ವಹಣೆಗೆ ದ್ವೇಷದ ಹೇಳಿಕೆಗಳೂ ಒಂದುಮಟ್ಟಕ್ಕೆ ಕಾರಣವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಭಿಪ್ರಾಯಪಟ್ಟಿದ್ದಾರೆ. ದೆಹಲಿ ಚುನಾವಣಾ ಪ್ರಚಾರ ಸಂದರ್ಭಗಳಲ್ಲಿ ಪಕ್ಷದ ವಿವಿಧ ನಾಯಕರು ಎದುರಾಳಿ ಅಭ್ಯರ್ಥಿಗಳ ವಿರುದ್ಧ ದ್ವೇಷದ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಾಗಿದ್ದರು ಮತ್ತು ಚುನಾವಣಾ ಆಯೋಗದ ಕೆಂಗಣ್ಣಿಗೂ ಗುರಿಯಾಗಿದ್ದರು. ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಈ ವಿಚಾರದ ಕುರಿತಂತೆ ಪ್ರಶ್ನಿಸಿದಾಗ ಅವರು, ‘ಪಕ್ಷದ ನಾಯಕರು ನೀಡಿದ್ದ ದ್ವೇಷಪೂರಿತ ಹೇಳಿಕೆಗಳು ಫಲಿತಾಂಶ ದಲ್ಲಿ ನಮಗೆ ಹಿನ್ನಡೆಯಾಗಲು ಪ್ರಮುಖ ಕಾರಣವಾಗಿರ ಬಹುದೆಂದು ನಮಗನಿಸುತ್ತದೆ’ ಎಂದು ತಿಳಿಸಿದರು.
ನಮ್ಮ ನಾಯಕರು ಆ ರೀತಿಯ ಹೇಳಿಕೆಗಳನ್ನು ನೀಡಬಾರದಿತ್ತು ಎಂದೂ ಸಹ ಬಿಜೆಪಿಯ ಮಾಜೀ ರಾಷ್ಟ್ರಾಧ್ಯಕ್ಷರೂ ಆಗಿರುವ ಅಮಿತ್ ಶಾ ಅಭಿಪ್ರಾಯ ಪಟ್ಟರು. ದೆಹಲಿ ಚುನಾವಣಾ ಪ್ರಚಾರ ಸಂದರ್ಭಗಳಲ್ಲಿ ಬಿಜೆಪಿಯ ನಾಯಕರು, ‘ಗೋಲಿ ಮಾರೋಂ’, ಮತ್ತು ದೆಹಲಿ ಚುನಾವಣೆಯನ್ನು ಭಾರತ ಮತ್ತು ಪಾಕಿಸ್ಥಾನ ನಡುವಿನ ಕ್ರಿಕೆಟ್ ಪಂದ್ಯಾಟಕ್ಕೆ ಹೋಲಿಸಿದ್ದು ಮುಂತಾದ ವಿಚಾರಗಳು ರಾಷ್ಟ್ರ ರಾಜಧಾನಿಯಲ್ಲಿ ಕಮಲ ಅರಳುವಲ್ಲಿ ತೊಡಕಾಯಿತು ಎಂದು ಇದೀಗ ಅಮಿತ್ ಶಾ ಅಭಿಪ್ರಾಯಪಟ್ಟರು.
ದ್ವೇಷಪೂರಿತ ಮತ್ತು ಆಕ್ಷೇಪಣಾ ಕಾರಿ ಹೇಳಿಕೆಗಳನ್ನು ನೀಡಿದ್ದ ಕಾರಣಕ್ಕಾಗಿ ಕೇಂದ್ರ ಸಚಿವ ಅನುರಾಗ್ ಠಾಕೂರ್, ಸಂಸದ ಪರ್ವೇಶ್ ವರ್ಮಾ ಮತ್ತು ಬಿಜೆಪಿಯ ಮಾಡೆಲ್ ಟೌನ್ ಅಭ್ಯರ್ಥಿ ಕಪಿಲ್ ಮಿಶ್ರಾ ಅವರನ್ನು ಚುನಾವಣಾ ಪ್ರಚಾರ ನಡೆಸುವುದಕ್ಕೆ ಚುನಾವಣಾ ಆಯೋಗವು ಬಹಿಷ್ಕಾರ ಹಾಕಿದ್ದನ್ನು ಈ ಸಂದರ್ಭ ದಲ್ಲಿ ಗಮನಿಸಲೇ ಬೇಕಾದ ಅಂಶವಾಗಿದೆ.
click and follow Indiaherald WhatsApp channel