ಬೆಂಗಳೂರು: ಗ್ರಾಮಾಂತರ ಪ್ರದೇಶಗಳಲ್ಲಿ ಜನರಿಗೆ ಅರಿವು ಮೂಡಿಸುತ್ತಾ ಕಾರ್ಯ ನಿರ್ವಹಿಸಬೇಕಾದ ಆಶಾ ಕಾರ್ಯಕರ್ತೆಯರು ಶುಕ್ರವಾರ ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಹೌದು, ಅದು ಬರೋಬ್ಬರಿ 30 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು. ಅವರ ಬೇಡಿಕೆಗಳಿಗೆ ಪ್ರತಿಕ್ರಿಯಿಸಿದ ಶ್ರೀ ರಾಮುಲು ಹೇಳಿದ್ದೇನು. 
 
 ವಿವಿಧ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಬೃಹತ್ ಪ್ರತಿಭಟನೆ ಮಾಡಿದ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಸಚಿವ ಶ್ರೀ ರಾಮುಲು ಬೇಡಿಕೆ ಈಡೇರಿಸುವ ಭರವಸೆ ನೀಡುವಾಗ ಅಡ್ಡ ಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ. ಹೌದು, ಒಂದಕ್ಕೂ ಸಹ ಸ್ಪಷ್ಟವಾದ ನೇರವಾದ ಉತ್ತರ ಗಳಿಲ್ಲ.  ದಿಲ್ಲಿಯಲ್ಲಿ ಬೃಹತ್ ಪ್ರತಿಭಟನೆ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ಶ್ರೀ ರಾಮುಲು ಈಗಾಗಲೇ ಆಶಾ ಕಾರ್ಯಕರ್ತೆಯರ ಸಂಬಳವನ್ನು 500 ರು. ಏರಿಸಲಾಗಿದೆ.
 
12 ಸಾವಿರಕ್ಕೆ ಏರಿಕೆ ಮಾಡಲು ಸಾಧ್ಯವಿಲ್ಲ. ಆದರೆ ಉಳಿದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಪ್ರಮುಖ ಬೇಡಿಕೆಗಳಲ್ಲಿ ಒಂದಾದ ಆಶಾ ಕಾರ್ಯಕರ್ತೆಯರ ಕ್ಷೇಮಾಭಿವೃದ್ಧಿ ಸಂಘ ಮಾಡಲು ಕಾನೂನಿನ ತೊಡಕಿದೆ. ಉಳಿದಂತೆ  10 ಬೇಡಿಕೆ ಗಳಲ್ಲಿ 7 ಬೇಡಿಕೆ ಈಡೇರಿಸಿದ್ದೇವೆ.  ಇನ್ನು ವೇತನವನ್ನು 10 ಸಾವಿರ ರು.ವರೆಗೆ ಏರಿಕೆ ಮಾಡಲು ಸರ್ಕಾರದ  ಬಜೆಟ್ ನಲ್ಲಿ ಸೇರಿಸಬೇಕಾಗಿದ್ದು, ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. 
 
ಆಶಾ ಕಾರ್ಯಕರ್ತೆ ಯರು ಸರ್ಕಾರ ದ ಮುಂದೆ ತಮ್ಮ ವಿವಿಧ ಬೇಡಿಕೆಗಳನ್ನು ಇಟ್ಟಿದ್ದಾರೆ. ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯ ಮತ್ತು ಸೇವಾ ಭದ್ರತೆ ನೀಡುವಂತೆ ಪ್ರತಿಭಟನೆಯಲ್ಲಿ ಹಕ್ಕೊತ್ತಾಯ ಮಾಡಿದ್ದಾರೆ.  ಆಶಾ ಕಾರ್ಯಕರ್ತೆಯರ ಮಾಸಿಕ ಗೌರವ ಧನ ಕನಿಷ್ಠ 12000 ನೀಡುವಂತೆ ಪ್ರತಿಭಟನೆ ಮೂಲಕ ಆಗ್ರಹಿಸಿ ದ್ದಾರೆ. ಸರ್ಕಾರಿ ನೌಕರರಾಗಿ ಪರಿಗಣಿಸಬೇಕು, ಜೀವ ವಿಮೆ, ಆರೋಗ್ಯ ವಿಮೆ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆ ಗಳಿಗೆ ಆಗ್ರಹಿಸಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಸರ್ಕಾರ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆಯೋ ಕಾದು ನೋಡಬೇಕಾಗಿದೆ

మరింత సమాచారం తెలుసుకోండి: