ಭಾರತ್ ಲಾಕ್ ಡೌನ್ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ಅದೇಶ ಹೊರಡಿಸುತ್ತಿದ್ದಂತೆ ದೇಶದ ಎಲ್ಲಾ ಜಿಲ್ಲೆಗಳು ಸ್ಥಬ್ದವಾಗಿರುವ ಕಾರಣ ಅಗತ್ಯ ವಸ್ತುಗಳಿಗಾಗಿ ಪರದಾಡುವಂತಹ ಸನ್ನಿವೇಶ ಎದುರಾಗಿದೆ ಆದರೆ ಕರ್ನಾಟಕದ ಸಂಸದರೊಬ್ಬರು ಈ ಒಂದು ಸಮಸ್ಯೆಯನ್ನು ಬಗೆಹರಿಸಲು ಸೂಕ್ತವಾದ ಕ್ರಮನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಅಷ್ಟಕ್ಕೂ ಸಂಸದರು ತೆಗೆದುಕೊಂಡಿರುವ ಆಕ್ರಮವಾದರೂ ಯಾವುದು ಗೊತ್ತಾ ಇಲ್ಲಿದೆ ನೋಡಿ. 

 

 

ಮಾರಕ ಕೋವಿಡ್ ಸೋಂಕಿನಿಂದ ಇಡೀ ದೇಶವೇ ಕಂಗೆಟ್ಟಿದೆ ಅಂತೆಯೇ ಪ್ರಧಾನಿ ೨೧ ದಿನಗಳ ಕಾಲ ಲಾಕ್ ಡೌನ್ ಮಾಡಿ ಆದೇಶ ನೀಡಿದ್ದು ಇದರೊಂದಿಗೆ ಅಗತ್ಯ ವಸ್ತುಗಳ ಅಂಗಡಿಗಳು ಸಾರ್ವಜನಿಕರಿಗೆ ಮುಕ್ತವಾಗಿತ್ತು ಆದರೆ ನಾಳೆಯಿಂದ ಅದನ್ನು ಸೇರಿದಂತೆ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಆಗಲಿದೆ. 

 

 

ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಸ್ತಬ್ದಗೊಳ್ಲುವುದರಿಂದ ಜನರಿಗೆ ಅಗತ್ಯ ವಸ್ತುಗಳ ಕೊರತೆ ಉಟಾಗಬಹುದು ಆದರೆ ಇದಕ್ಕೆ ಪರಿಹಾರ ಮಾರ್ಗವಾಗಿ ಜನರಿಗೆ ಬೇಕಾದ ಎಲ್ಲಾ ಸವಲತ್ತುಗಳನ್ನು ನಾವೇ ಮನೆಗೆ ತಲುಪಿಸುತ್ತೇವೆ. ಸರ್ಕಾರದ ಕಡೆಯಿಂದ ಹೇಗೆ ತಲುಪಿಸೋದು, ಅಪಾರ್ಟ್ ಮೆಂಟ್ ಗಳಿಗೆ ಹೇಗೆ ತಲುಪಿಸೋದು ಅಂತ ಮಾತುಕತೆ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್  ಮಾಧ್ಯಮದವರಿಗೆ ತಿಳಿಸಿದ್ದಾರೆ.

 

 

ಕೇರಳ ಭಾಗದಿಂದ ಮಂಗಳೂರಿಗೆ ಅಂಬ್ಯುಲೆನ್ಸ್ ಬರುವ ವಿಚಾರವಾಗಿ ಮಾತನಾಡಿದ ಅವರು ಮಂಗಳವಾರ ಅತೀ ಹೆಚ್ಚು ರೋಗಿಗಳು ಕೇರಳದಿಂದ ಮಂಗಳೂರಿಗೆ ಬಂದಿದ್ದಾರೆ. ಆದರೆ ಜಿಲ್ಲಾಡಳಿತ ಒಂದು ನಿರ್ಧಾರ ತೆಗೆದುಕೊಂಡಿದೆ. ಸದ್ಯದ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗಳು ನಮಗೆ ಸಾಕಾಗಲ್ಲ, ಹೀಗಾಗಿ ಹೊರಗಿನ ಯಾವುದೇ ವಾಹನ, ಅಂಬ್ಯುಲೆನ್ಸ್ ಸೇರಿ ಯಾವುದನ್ನೂ ಬಿಡಬಾರದು ಅಂತ ನಿರ್ಧರಿಸಲಾಗಿದೆ. ಎಲ್ಲಾ ಅಂಬ್ಯುಲೆನ್ಸ್ ಗಳನ್ನ ತಲಪಾಡಿ ಗಡಿಯಲ್ಲಿ ನಿರ್ಬಂಧಿಸಲಾಗುತ್ತಿದೆ. ಎಲ್ಲಾ ವಾಹನಗಳನ್ನು ಗಡಿಯಲ್ಲಿ ಬಂದ್ ಮಾಡಲಾಗಿದೆ ಎಂದು ಹೇಳಿದರು.

 

ಒಟ್ಟಿನಲ್ಲಿ ಜನರಿಗೆ ಅನುಕೂಲ ಆಗುವ ಹಾಗೆ ಮತ್ತು ಅವರನ್ನು ರಕ್ಷಣೆ ಮಾಡುವ ಹಾಗೆ ಕೇಂದ್ರ ಸರ್ಕಾರ ಎಲ್ಲ ಹೆಜ್ಜೆಗಳನ್ನು ಇಡೋಕೆ‌ ಮುಂದಾಗಿದೆ. 

మరింత సమాచారం తెలుసుకోండి: