ಕೊರೋನಾ ವೈರಸ್ ಇಂದಾಗಿ ಭಾರತದಲ್ಲಿ ಲಾಕ್ ಡೌನ್ ಅನ್ನು ಘೋಷಣೆಯನ್ನು ಮೊದಲಬಾರಿಗೆ 21 ದಿನಗಳ ಕಾಲ ಲಾಕ್ ಡೌನ್ ಘೋಷಣೆಯನ್ನು ಮಾಡಲಾಗಿತ್ತು. ಆದರೆ ಲಾಕ್ ಡೌನ್ ಮಾಡಿದರೂ ಕೂಡ ಕೊರೋನಾ ವೈರಸ್ ಸೋಂಕು ಕಡಿಮೆಯಾಗದ ಕಾರಣ ಮತ್ತೆ ಲಾಕ್ ಡೌನ್ ಅನ್ನು ಏಪ್ರಿಲ್ 30 ರವರೆಗೆ ಮುಂದುವರಿಸಲಾಗಿದೆ. ಇದರಿಂದ ಆರ್ಥೀಕ ಪರಿಸ್ಥಿತಿ ಕುಸಿದ ಕಾರಣ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರ ಕೆಲವು ಕ್ರಮಗಳನ್ನು ಕೈಗೊಂಡಿದೆ ಅಷ್ಟಕ್ಕೂ ಸರ್ಕಾರ ಕೈಗೊಂಡಿರುವ ಕ್ರಮಗಳೇನು ಗೊತ್ತಾ..?
ಕೊರೋನಾ ವೈರಸ ಇಂದಾಗಿ ರಾಷ್ಟ್ರವನ್ನು ಲಾಕ್ ಡೌನ್ ಮಾಡಿದ್ದರಿಂದ ರಾಜ್ಯ ಸರ್ಕಾರಕ್ಕೆ ಆದಾಯ ಸಂಪೂರ್ಣವಾಗಿ ಕಡಿಮೆಯಾದ ಕಾರಣ. ರಾಜ್ಯದ್ಲಿ ಕೊರೋನಾ ವೈರಸ್ ವಿರುದ್ಧ ಹೋರಾಡಲು ಸಾಕಷ್ಟು ಕಷ್ಟ ಸಾಧ್ಯವಿರುವುದರಿಂದ ಸರ್ಕಾರ ಕೆಲವು ಕ್ರಮಗಳನ್ನು ಕೈಗೊಂಡಿದೆ.
ಹೌದು ಕರ್ನಾಟಕ ಸರ್ಕಾರ ಲಾಕ್ ಡೌನ್ ಸಮಯದಲ್ಲಿ ಎಂಎಸ್ ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಚಿಂತನೆ ಇದೆ. ಇದನ್ನು ಏಪ್ರಿಲ್ 14 ರ ಬಳಿಕ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ಇಂದು ಸಚಿವ ಸಂಪುಟದ ಸಹದ್ಯೋಗಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ನೀಡಬೇಕಿರುವ ಬಾಕಿ ಹಣ 2834 ಕೋಟಿ ರೂ. ಕೂಡಲೇ ಪಾವತಿಸಲು ಸೂಚಿಸಲಾಗಿದೆ. ಈ ಬಗ್ಗೆ ಗಮನ ಹರಿಸದಿದ್ದರೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಯಡಿಯೂರಪ್ಪ ಎಚ್ಚರಿಸಿದರು.
ಇತ್ತೀಚೆಗೆ ರಾಯಚೂರು, ಕೊಪ್ಪಳ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಿಂದ ಭತ್ತದ ಬೆಳೆ ನಾಶವಾಗಿದೆ. ಈ ಭಾಗದ ರೈತರಿಗೆ ಪರಿಹಾರ ನೀಡಲು 45 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು. ಕೃಷಿ ಸಚಿವ ಬಿ.ಸಿ.ಪಾಟೀಲ್ ಕೊಪ್ಪಳ ರಾಯಚೂರು ಜಿಲ್ಲೆಯಲ್ಲಿ ಮಳೆಯಿಂದ ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಿ ಮನವಿ ಮಾಡಿದ್ದರು. ಕೃಷಿ ಸಚಿವರ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಈ ಭಾಗದ ಭತ್ತ ಹಾನಿ ರೈತರಿಗೆ ಸರ್ಕಾರ ಪರಿಹಾರ ಘೋಷಿಸಿದೆ.
ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಹಲವು ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ. ಸದ್ಯ ರಾಜ್ಯದ ಆರ್ಥಿಕ ಸ್ಥಿತಿ ಸರಿಯಿಲ್ಲ. ಇದನ್ನು ಮತ್ತೆ ಸುಸ್ಥಿತಿಗೆ ತರಲು ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ರಾಜ್ಯದಲ್ಲಿ ಲಾಕ್ ಡೌನ್ ಸಡಿಲಗೊಳಿಸಬೇಕೆ ಬೇಡವೆ ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಕುರಿತು ಪ್ರಧಾನಿ ಮೋದಿ ಸಲಹೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಯಡಿಯೂರಪ್ಪ ತಿಳಿಸಿದರು.
ಕೋವಿಡ್ 19 ರಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಕುಸಿತವಾಗಿದೆ. ಇದನ್ನು ಸರಿದೂಗಿಸಲು ಹಲವು ಮಾರ್ಗೋಪಾಯಗಳನ್ನು ಕಂಡು ಹಿಡಿಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ 1೦೦೦ ಕೋಟಿ ರೂಪಾಯಿಗಳನ್ನು ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯ ಅಭಿವೃದ್ಧಿಗೆ ಬಳಸಲು ತೀರ್ಮಾನಿಸಲಾಯಿತು. ಮುಂದಿನ ಒಂದು ವಾರಕ್ಕೆ ಉಚಿತ ಹಾಲು ವಿತರಣೆ ವಿಸ್ತರಿಸಲಾಗುವುದು. ರಾಜ್ಯದ ಇತರ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿಯೂ ಮೂಲ ನಿವೇಶನಗಳು ಹಾಗೂ ಖಾಲಿ ಇರುವ ನಿವೇಶನಗಳನ್ನು ಹರಾಜು ಹಾಕಲು ಕ್ರಮ ವಹಿಸಲಾಗುವುದು. ಪ್ರಸ್ತುತ ಕೋವಿಡ್ ೧೯ಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಡಿ ಪೋರ್ಟಲ್ ಗಳನ್ನು ನಿರ್ವಹಿಸಲಾಗುತ್ತಿದ್ದು, ಇವುಗಳನ್ನು ಏಕೀಕೃತ ಪೋರ್ಟಲ್ ವ್ಯವಸ್ಥೆಯಡಿ ತರಲು ತೀರ್ಮಾನಿಸಲಾಯಿತು ಎಂದು ಯಡಿಯೂರಪ್ಪ ಹೇಳಿದರು.
click and follow Indiaherald WhatsApp channel