ಕೊರೋನಾ ವೈರಸ್ ತನ್ನ ಪ್ರಭಾವವನ್ನು ಹೆಚ್ಚಿಸುತ್ತಾ ಇದ್ದು  ಇದರಿಂದ ತಪ್ಪಿಸಿಕೊಳ್ಳುವುದೇ ತಲೆ ನೋವಾಗಿ ಸಂಭವಿಸಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಲೇ ಇದೆ. ಈ ನಡುವೆ ಸರ್ಕಾರಗಳು ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದೆ. ಆದರೆ ಈ ಸಡಿಲಿಕೆಯೇ ಈಗ ಮಾರಕವಾಗಿ ಪರಿಣಮಿಸಿದೆ. ಈ ಸಡಿಲಿಕೆಯಿಂದ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುತ್ತಲೇ ಇರುವುದು ಜನರನ್ನು ಆತಂಕಕ್ಕೆ ದೂಡಿದೆ.

 

ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ದಾಖಲೆಯ ಏರಿಕೆಯಾಗಿದೆ. ಇದು ಈ ಹಿಂದಿನ ಎಲ್ಲಾ ದಿನಗಳಿಗಿಂತ ಹೆಚ್ಚಿನ ಕೊರೋನಾ ಪಾಸಿಟಿವ್ ಸೋಂಕಿತರ ಸಂಖ್ಯೆಗಾದಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 48 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ

.

ಈ ಕುರಿತಂತೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾತನಾಡಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ರಾಜ್ಯದಲ್ಲಿ ಇಂದು ಒಂದೇ ದಿನ ದಾಖಲೆಯ ಕೊರೋನಾ ಕೇಸ್ ಪತ್ತೆಯಾಗಿದೆ. ಈ ಹಿಂದಿನ ಎಲ್ಲಾ ದಾಖಲೆಯನ್ನು ಮುರಿಯುವಂತೆ 48 ಕೊರೋನಾ ಕೇಸ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದರು.

 

ಅಂದಹಾಗೇ ಇಂದು ದಾವರಣೆಗೆರೆ 14, ಬೆಳಗಾವಿ 11, ಉತ್ತರಕನ್ನಡ 12, ಬೆಂಗಳೂರು ನಗರ 7, ಚಿತ್ರದುರ್ಗ 3, ಬಳ್ಳಾರಿ ಒಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ 48 ಜನರಿಗೆ ಕೊರೋನಾ ಸೋಂಕು ತಗುಲಿ, ಕೊರೋನಾ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ ಎಂದರು.

ಉತ್ತರಕನ್ನಡದ ಭಟ್ಕಳದಲ್ಲಿ ಇಂದು 12 ಜನರಿಗೆ ಕೊರೋನಾ ಕೇಸ್ ಪತ್ತೆಯಾಗಿದೆ. ಇಂತವರಲ್ಲಿ 7 ಜನರು ಒಂದೇ ಕುಟುಂಬದವರಾಗಿದ್ದಾರೆ. ಇವರಲ್ಲಿ ಒಬ್ಬರು ಪಕ್ಕದ ಮನೆಯವರಾಗಿದ್ದಾರೆ ಎಂದು ತಿಳಿಸಿದರು.

 

ಚಿತ್ರದುರ್ಗದ ಮೂವರು ಕೊರೋನಾ ಸೋಂಕಿತರು ಅಹಮದಾಬಾದ್ ಗೆ ತೆರಳಿದ್ದರು. ಮೇ.3ರಂದು ಚಿತ್ರದುರ್ಗಕ್ಕೆ 15 ಜನರು ಬಂದು ಇಳಿದುಕೊಂಡಿದ್ದರು. ಅವರಲ್ಲಿ ಮೂವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಸ್ಪಷ್ಟ ಪಡಿಸಿದರು.

 

ಇನ್ನೂ ಕಿಲ್ಲರ್ ಕೊರೋನಾಗೆ ಇದುವರೆಗೆ 30 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದರೇ, ಸೋಂಕಿತರಾದಂತ 376 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂಬುದಾಗಿ ಮಾಹಿತಿ ನೀಡಿದರು.

 

Find out more: