ಕೊರೋನಾ ವೈರಸ್ ಅನ್ನು ತಡೆಯುವ ಉದ್ದೇಶದಿಂದ ದೇಶದಲ್ಲಿ ಲಾಕ್ ಡೌನ್ ಮಾಡಿದ್ದರೂ ಕೂಡ ಕೊರೋನಾ ಸೋಂಕು ಹೆಚ್ಚಾಗುತ್ತಲೇ ಹೆಚ್ಚುತ್ತಲೇ ಇದೆ. ಇದರ ಜೊತೆಗೆ ಲಾಕ್ ಡೌನ್ ಇಂದಾಗಿ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ. ಇದನ್ನು ಪರಿಹರಿಸುವ ದೃಷ್ಠಿಯಿಂದ 20 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜ್ ಅನ್ನು ಘೋಷಿಸಿದ್ದಾರೆ ಇದಕ್ಕೆ ದೇಶದ ವಿವಿಧ ರಾಜಕೀಯ ನಾಯಕರು ಇದಕ್ಕೆ ಪರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಯಾವ ಯಾವ ನಾಯಕರು ಇದಕ್ಕೆ ಪರ ವಿರೋಧ ವ್ಯಕ್ತ ಪಡಿಸಿದ್ದಾರೆ ಗೊತ್ತಾ…?
ಕೋವಿಡ್19 ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಲು, ಆರ್ಥಿಕತೆಗೆ ಶಕ್ತಿ ತುಂಬಲು ಮತ್ತು ಸಂಕಷ್ಟ ಎದುರಿಸುತ್ತಿರುವ ಎಲ್ಲ ವರ್ಗಗಳ ಜನತೆಗೆ ನೆರವಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 20 ಲಕ್ಷ ಕೋಟಿ ರೂ. ಮೊತ್ತದ (ನಮ್ಮ ಜಿಡಿಪಿಯ ಶೇ.10ರಷ್ಟು) ಅಭೂತಪೂರ್ವ ಆರ್ಥಿಕ ಪ್ಯಾಕೇಜ್ ಘೋಷಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಆರ್ಥಿಕ ಪ್ಯಾಕೇಜ್ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್ ವಿವರಣೆ ನೀಡಲಿದ್ದು ಈ ಪ್ಯಾಕೇಜ್ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಮುಖ್ಯ ಪಾತ್ರ ವಹಿಸಲಿದೆ. ವಿಶ್ವವೇ ಭಾರತದ ಕೋವಿಡ್ -19 ವಿರುದ್ಧದ ಹೋರಾಟಕ್ಕೆ ಮೆಚ್ಚುಗೆ ಸೂಚಿಸಿದ್ದು ಇದರಲ್ಲಿ ಭಾರತ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರ ಭಾಷಣವನ್ನು ಟೀಕಿಸಿರುವ ಪ್ರತಿಪಕ್ಷ ಕಾಂಗ್ರೆಸ್, ದೇಶ ಪ್ರಧಾನಿ ಮೋದಿ ಅವರ ಭಾಷಣದಿಂದ ನಿರಾಶವಾಗಿದೆ ಎಂದು ಹೇಳಿದೆ. ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವುದು ಮತ್ತು ಅವರಿಗೆ ಸೂಕ್ತ ಆರ್ಥಿಕ ನೆರವು ನೀಡುವ ಕುರಿತು ಪ್ರಧಾನಿ ಮೋದಿ ಭಾಷಣದಲ್ಲಿ ಸೂಕ್ತ ಉಲ್ಲೇಖವಿರಲಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಕುರಿತು ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಣ್‌ದೀಪ್ ಸುರ್ಜೆವಾಲಾ, ಪ್ರಧಾನಿ ಮೋದಿ ಅವರ ಇಂದಿನ ಭಾಷಣ ಮಾಧ್ಯಮ ಪ್ರಚಾರದಂತಿತ್ತು ಎಂದು ಕಿಡಿಕಾರಿದ್ದಾರೆ. ರಸ್ತೆಗಳಲ್ಲಿರುವ ಲಕ್ಷಾಂತರ ಕಾರ್ಮಿಕರ ನೆರವಿಗೆ ಬರುವ ಕುರಿತು ಸೂಕ್ತ ಮಾಹಿತಿಯೇ ನೀಡದ ಪ್ರಧಾನಿ, ಎಂದಿನಂತೆ ಮಾಮೂಲಿ ಭಾಷಣ ಮಾಡಿದ್ದಾರೆ ಎಂದು ಸುರ್ಜೆವಾಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೇಶದ ಆರ್ಥಿಕ ಸ್ಥಿರತೆಗಾಗಿ ಪ್ರಧಾನಿ ಮೋದಿ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿರುವ ನಡೆಯನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸ್ವಾಗತಿಸಿದ್ದಾರೆ. ಆರ್ಥಿಕ ಪ್ಯಾಕೇಜ್ ಘೋಷಣೆಯನ್ನು ಸರಿಯಾದ ಮಾರ್ಗ ಎಂದು ಬಣ್ಣಿಸಿರುವ ಅಶೋಕ್ ಗೆಹ್ಲೋಟ್, ಆರ್ಥಿಕ ಸ್ಥಿರತೆಗಾಗಿ ಇದು ಅತ್ಯಂತ ಅವಶ್ಯ ಎಂದು ಹೇಳಿದ್ದಾರೆ.
ವಲಸೆ ಕಾರ್ಮಿಕರ ಕುರಿತು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದು, ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಮನೆಗೆ ಸೇರಿಸುವುದು ಮತ್ತು ಅವರಿಗೆ ಆರ್ಥಿಕ ನೆರವು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಹೇಳಿದ್ದಾರೆ.
click and follow Indiaherald WhatsApp channel