ಕೊರೋನಾ ವೈರಸ್ ನಿಂದ ಉಂಟಾದ ಬಿಕ್ಕಟ್ಟನ್ನು ಸರಿದೂಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 20ಲಕ್ಷ ಕೋಟಿ ರೂಗಳನ್ನು ಬಿಡುಗಡೆ ಮಾಡಿದೆ ಇದರಿಂದಾಗಿ ದೇಶದಲ್ಲಿ ಉಂಟಾಗಿರುವ ಆರ್ಥಿಕ ಮುಕ್ಕಟ್ಟನ್ನು ಸರಇಪಡಿಸಬಹುದು ಎಂಬ ಆಶಾಭಾವನೆಯಲ್ಲಿದ್ದಾರೆ ದೇಶದ ಜನತೆ. ಕೇಂದ್ರ ಪ್ಯಾಕೇಜ್ ಬಗ್ಗೆ ಕೆಲವು ಹಾಸ್ಯವಾಗಿ ಮಾತನಾಡಿ ಲೇವಡಿ ಮಾಡಿದ್ದಾರೆ ಆದರೆ ಕೆಲವರು ಇದಕ್ಕೆ ಒಲವು ತೋರಿದ್ದಾರೆ. ಈ ಪ್ಯಾಕೇಜ್ ಕುರಿತು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ನವರ ಅಭಿಪ್ರಾಯ ಏನು ಗೊತ್ತಾ..?

 

ಆತ್ಮ ನಿರ್ಭರ್ ಭಾರತ ಆರ್ಥಿಕ ಪುನಶ್ಚೇತನ ಯೋಜನೆಯೆ ಎರಡನೇ ದಿನದ ಘೋಷಣೆಗಳು, ಪ್ರಧಾನಿ ಮೋದಿ ಅವರಿಗೆ ಬಡವರ ಬಗ್ಗೆ ಇರುವ ಕಾಳಜಿಯನ್ನು ಬಿಂಬಿಸುತ್ತದೆ. ಎಲ್ಲರನ್ನೊಳಗೊಂಡ ಪ್ರಗತಿಯ ಆಶಯವನ್ನು ದೃಢಪಡಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿಪ್ರಾಯಪಟ್ಟಿದ್ದಾರೆ.

 

ಯಡಿಯೂರಪ್ಪ ಪ್ರತಿಕ್ರಿಯೆಯ ಅಂಶಗಳು ಹೀಗಿವೆ

 

ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ರೈತರು, ಕೂಲಿ ಕಾರ್ಮಿಕರು ಮೊದಲಾದ ಎಲ್ಲ ಸಮುದಾಯಗಳಿಗೆ ಮೂಲಸೌಲಭ್ಯ ಮತ್ತು ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳು ಶ್ಲಾಘನೀಯ. ರಾಜ್ಯ ಮತ್ತು ಪ್ರಾಂತೀಯ ವಲಯದಲ್ಲಿ ಇರುವ ಕನಿಷ್ಠ ವೇತನ ತಾರತಮ್ಯವನ್ನು ತೆಗೆದು ಹಾಕುವುದು, ತಮ್ಮ ಊರುಗಳಿಗೆ ಹಿಂದಿರುಗಿದ ವಲಸೆ ಕಾರ್ಮಿಕರಿಗೆ ವರದಾನವಾಗಲಿದೆ.

 

8 ಕೋಟಿ ವಲಸಿಗ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದಿದ್ದರೂ 3500 ಕೋಟಿ ರೂ. ವೆಚ್ಚದಲ್ಲಿ ಎರಡು ತಿಂಗಳು ಉಚಿತ ಪಡಿತರ ವಿತರಣೆ, ವಲಸೆ ಕಾರ್ಮಿಕರಿಗೆ ಮನೆ ಬಾಡಿಗೆ ದರ ನಿಗದಿ ಮೊದಲಾದ ಕ್ರಮಗಳು ಅವರಿಗೆ ಹೆಚ್ಚಿನ ಭದ್ರತೆಯನ್ನು ನೀಡಲಿದೆ.

ಮುದ್ರಾ ಶಿಶು ಸಾಲ ಯೋಜನೆಗೆ ಬಡ್ಡಿ ರಿಯಾಯಿತಿ, ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂ. ವರೆಗೆ ವಿಶೇಷ ಸಾಲ ಸೌಲಭ್ಯ ಒದಗಿಸಲು 5 ಸಾವಿರ ಕೋಟಿ ಅನುದಾನ ನಿಗದಿ ಪಡಿಸಿರುವುದು ಬೀದಿ ಬದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ.ಮಧ್ಯಮ, ಕೆಳ ಮಧ್ಯಮ ವರ್ಗದವರಿಗೆ ಗೃಹ ಸಾಲ ಸಬ್ಸಿಡಿ ಯೋಜನೆಗೆ 70 ಸಾವಿರ ಕೋಟಿ ರೂ. ನೆರವು ಈ ವರ್ಗದ ಜನರ ಕನಸು ಸಾಕಾರಗೊಳಿಸಲು ನೆರವಾಗಲಿದೆ. ಸಣ್ಣ ಮತ್ತು ಮಧ್ಯಮ ರೈತರಿಗೆ ಬೆಳೆ ಕೊಯ್ಲು ಮತ್ತು ಕೊಯ್ಲೋತ್ತರ ನಿರ್ವಹಣೆಗೆ ರೈತ ನಿಧಿಗೆ ಹೆಚ್ಚುವರಿ 30 ಸಾವಿರ ಕೋಟಿ ರೂ. ಸೇರ್ಪಡೆ

 

ಸಣ್ಣ ರೈತರು, ಪಶುಪಾಲಕರು ಮತ್ತು ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನಡಿ 2 ಲಕ್ಷ ಕೋಟಿ ಸಾಲ ಸೌಲಭ್ಯ ನೀಡುವ ಕ್ರಮಗಳು ಸಂಕಷ್ಟಕ್ಕೊಳಗಾದ ಈ ವಲಯಗಳ ಜನರಿಗೆ ಉಸಿರು ನೀಡಿದೆ.

 

మరింత సమాచారం తెలుసుకోండి: