ಕೊರೋನಾ ವೈರಸ್ ಅನ್ನು ತಡೆಯುವ ಉದ್ದೇಶದಿಂದ  ಇಡೀ ದೇಶ ದಾದ್ಯಂತ ಮತ್ತೊಮ್ಮೆ 2 ವಾರಗಳ ಕಾಲ ಲಾಕ್ ಡೌನ್ ಅನ್ನು ವಿಸ್ತರಣೆಯನ್ನು ಮಾಡಲಾಗಿದೆ. ಈ ಕುರಿತಾಗಿ ಕೇಂದ್ರದಿಂದ ಮಾರ್ಗಸೂಚಿಯನ್ನು ತಿಳಿಸಲಾಗಿದೆ. ಈ ಮಾರ್ಗ ಸೂಚಿಯಂತೆ ದೇಶದಲ್ಲಿ ಲಾಕ್ ಡೌನ್ ಮುಂದುವರಿಯಲಿದೆ ಅಷ್ಟಕ್ಕೂ ಆ ಮಾರ್ಗ‍ ಸೂಚಿ ಯಲ್ಲಿ ಏನೇನು ನಿಯಮಗಳನ್ನು ತಿಳಿಸಲಾಗಿದೆ ಗೊತ್ತಾ..?

 

 

ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ನಿರೀಕ್ಷೆಯಂತೆ ದೇಶಾದ್ಯಂತ ಮತ್ತೆ ನಾಲ್ಕನೇ ಬಾರಿಗೆ ಎರಡು ವಾರಗಳ ( ಮೇ 31 ರವರೆಗೆ) ಕಾಲ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಆದರೆ ಪ್ರಧಾನಿ ಮೋದಿ ಹೇಳಿದಂತೆ ಈ ಲಾಕ್‌ಡೌನ್ ಸಾಕಷ್ಟು ಸಡಿಲಿಕೆಗಳಿಂದ ಕೂಡಿರಲಿದೆ. ಸೋಮವಾರದಿಂದ ಲಾಕ್ ಡೌನ್ 4.0 ಹೊಸ ನಿಯಮಗಳೊಂದಿಗೆ ಆರಂಭವಾಗಲಿದೆ. ಇದಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ಹಲವಾರು ನಿರ್ಬಂಧಗಳನ್ನು ತೆರವು ಮಾಡಲಾಗಿದೆ. ಹೊಸ ಮಾರ್ಗಸೂಚಿಗಳನ್ವಯ ವಾಣಿಜ್ಯ ಚಟುವಟಿಕೆಗಳಿಗೆ ಕೆಲವು ಸಡಿಲಿಕೆ ನೀಡಲಾಗಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ಸ್ಪಷ್ಟವಾಗಿ ಮಾರ್ಗಸೂಚಿಯಲ್ಲಿ ನಮೂದಿಸಲಾಗಿದೆ.

 

ಈ ಕುರಿತು ಎಲ್ಲಾ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಸಂದೇಶ ರವಾನಿಸಿರುವ ಕೇಂದ್ರ ಗೃಹ ಸಚಿವಾಲಯ, ಮಾರಕ ಕೊರೊನಾ ವೈರಸ್ ಹಾವಳಿಯನ್ನು ತಡೆಗಟ್ಟುವ ಉದ್ದೇಶದಿಂದ ಬಿಡುಗಡೆ ಮಾಡಲಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು ಎಂದು ಸ್ಪಷ್ಟಪಡಿಸಿದೆ.

ಕೇಂದ್ರದ ಉನ್ನತ ವಿಪತ್ತು ನಿರ್ವಹಣಾ ಸಂಸ್ಥೆಯಾಗಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಗೃಹ ಸಚಿವಾಲಯಕ್ಕೆ ನೀಡಿದ ಶಿಫಾರಸುಗಳ ಅನ್ವಯ ಈ ಆದೇಶ ಪ್ರಕಟವಾಗಿದೆ. ದೇಶದಲ್ಲಿ ಕೊವಿಡ್​-19 ತಡೆಗಟ್ಟಲು ಇನ್ನೂ ಹೆಚ್ಚಿನ ನಿಯಂತ್ರಣಾ ಕ್ರಮಗಳು ಅಗತ್ಯ ಇರುವ ಕಾರಣ ಲಾಕ್​ಡೌನ್​ ಅವಧಿ ವಿಸ್ತರಣೆ ಮಾಡಲಾಗಿದ್ದು, ಎಲ್ಲ ರಾಜ್ಯಸರ್ಕಾರಗಳಿಗೂ ಸೂಚನೆ ನೀಡಲಾಗಿದೆ.

 

ಕೇಂದ್ರ ಸರ್ಕಾರದ ಬದಲು ಕೆಂಪು, ಕಿತ್ತಳೆ, ಹಸಿರು ವಲಯಗಳನ್ನು ತೀರ್ಮಾನಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ನೀಡಲಾಗಿದೆ. ಸಾರ್ವಜನಿಕ ಸಭೆ, ಸಮಾರಂಭ, ಕಾರ್ಯಕ್ರಮಗಳಿಗೆ ನಿರ್ಬಂಧ ಎಂದಿನಂದೆ ಮುಂದುವರಿಸಲಾಗಿದೆ.

 

ನೊವೆಲ್ ಕೊರೊನಾ ವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆಯಲ್ಲಿ ಕಂಟೇನ್ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಕಂಟೇನ್ಮೆಂಟ್ ಝೋನ್ ಗಳಲ್ಲಿ ಕಾರ್ಯ ಚಟುವಟಿಕೆಗಳ ಬಗ್ಗೆ ಜಿಲ್ಲಾಡಳಿತವೇ ತೀರ್ಮಾನ ತೆಗೆದುಕೊಳ್ಳಲು ಅನುಮತಿ ನೀಡಲಾಗಿದೆ.

ಕೇಂದ್ರ ಸರ್ಕಾರವು ಮಾರ್ಗಸೂಚಿಯಲ್ಲಿ ಮೂರು ವಿಧಗಳನ್ನು ವಿಂಗಡಿಸಲಾಗಿದೆ. ಮೊದಲೇ ವರ್ಗದಲ್ಲಿ 10 ವರ್ಷದೊಳಗಿನ ಮಕ್ಕಳಿದ್ದು, ಎರಡನೇ ವರ್ಗದಲ್ಲಿ 60 ವರ್ಷದ ಮೇಲ್ಪಟ್ಟ ವೃದ್ಧರು ಹಾಗೂ ಮೂರನೇ ವರ್ಗದಲ್ಲಿ ಅನಾರೋಗ್ಯಕ್ಕೆ ತುತ್ತಾದವರನ್ನು ಗುರುತಿಸಲಾಗಿದೆ. ಈ ಮೂರು ವರ್ಗದ ಜನರು ಮನೆಗಳಿಂದ ಹೊರ ಬರದಂತೆ ಎಚ್ಚರಿಕೆ ನೀಡಲಾಗಿದೆ.

 

ಪಾಲಸಬೇಕಾದ ಷರತ್ತುಗಳು :


ದೇಶವ್ಯಾಪಿ ಲಾಕ್ ಡೌನ್ ಪರಿಸ್ಥಿತಿ ಮೇ 31ರವರೆಗೆ ಮುಂದುವರಿಯಲಿದೆ.ದೇಶಾದ್ಯಂತ ಈ ಎಲ್ಲಾ ಚಟುವಟಿಕೆಗಳ ಮೇಲೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.ಕೇಂದ್ರ ಗೃಹಸಚಿವಾಲಯದ ಅನುಮತಿ ಮೇರೆಗೆ ತುರ್ತು ವೈದ್ಯಕೀಯ ಸೇವೆಗಳು, ಏರ್ ಆಯಂಬುಲೆನ್ಸ್ ಸೇವೆಗಳು ಮತ್ತು ರಕ್ಷಣಾ ಉದ್ದೇಶಗಳನ್ನು ಹೊರತುಪಡಿಸಿದಂತೆ ಎಲ್ಲಾ ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನ ಸಂಚಾರ ಇರುವುದಿಲ್ಲ.

 

ಶಾಲಾ-ಕಾಲೇಜು ಬಂದ್ :
ಲಾಕ್​ಡೌನ್ ಮುಗಿಯುವವರೆಗೂ ಶಾಲಾ-ಕಾಲೇಜು ತೆರೆಯುವಂತಿಲ್ಲ. ಮೆಟ್ರೋ ಸಂಚಾರ ಸಹ ಇರುವುದಿಲ್ಲ. ಹೋಟೆಲ್ ಮತ್ತು ರೆಸ್ಟೋರೆಂಟ್​, ಚಿತ್ರಮಂದಿರಗಳು, ಮಾಲ್ ಬಂದ್. ವಿಮಾನಯಾನ ಸಂಚಾರಕ್ಕೂ ಸಹ ನಿರ್ಬಂಧ ವಿಧಿಸಲಾಗಿದೆ.
ಯಾವುದೇ ಮೆಟ್ರೋ ರೈಲು ಸೇವೆಗಳು ಇರುವುದಿಲ್ಲ., ಶಿಕ್ಷಣ/ತರಬೇತಿ ಸಂಸ್ಥೆಗಳು ಇತ್ಯಾದಿ ಯಾವುದೇ ರೀತಿಯ ಶೈಕ್ಷಣಿಕ ಸಂಸ್ಥೆಗಳು ಕಾರ್ಯಾಚರಿಸುವುದಿಲ್ಲ.

 

ಆಡಿಟೋರಿಯಂಗಳು, ಸಭಾಂಗಣಗಳು, ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಗಳನ್ನು ತೆರೆಯಲು ಅವಕಾಶವಿದ್ದರೂ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧವಿರುತ್ತದೆ. ಎಲ್ಲಾ ರೀತಿಯ ಬೃಹತ್ ಸಾಮಾಜಿಕ, ರಾಜಕೀಯ, ಕ್ರೀಡಾ, ಮನೋರಂಜನಾ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಮೇಲೆ ನಿರ್ಬಂಧ.

ಎಲ್ಲಾ ಧರ್ಮದವರ ಧಾರ್ಮಿಕ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹಾಗೂ ಎಲ್ಲಾ ರೀತಿಯ ಧಾರ್ಮಿಕ ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ. ಕೋವಿಡ್ ಸೋಂಕು ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ 65 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು, ಗರ್ಭಿಣಿಯರು, 10 ವರ್ಷಕ್ಕಿಂತ ಕೆಳಗಿನ ಪ್ರಾಯದ ಮಕ್ಕಳು ಕಡ್ಡಾಯವಾಗಿ ತಮ್ಮ ಮನೆಯಲ್ಲೇ ಇರಬೇಕು.

 

ಕಂಟೇನ್ಮೆಂಟ್ ಪ್ರದೇಶಗಳನ್ನು ಹೊರತಾಗಿಸಿ ಉಳಿದ ಕಡೆಗಳಲ್ಲಿ ಈ ಕೆಳಗಿನ ಕಾರ್ಯಚಟುವಟಿಕೆಗಳನ್ನು ಷರತ್ತುಬದ್ಧವಾಗಿ ನಡೆಸಬಹುದಾಗಿರುತ್ತದೆ. ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಪರಸ್ಪರ ಒಪ್ಪಿಗೆಯ ಮೇರೆಗೆ ಅಂತರ್ ರಾಜ್ಯ ಪ್ರಯಾಣಿಕ ವಾಹನಗಳು, ಬಸ್ಸುಗಳ ಓಡಾಟಕ್ಕೆ ಅವಕಾಶ.

ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ನಿರ್ಧಾರದ ಮೇರೆಗೆ ರಾಜ್ಯದೊಳಗಿನ ಪ್ರಯಾಣಿಕರ ವಾಹನಗಳು ಹಾಗೂ ಬಸ್ಸುಗಳ ಓಡಾಟಕ್ಕೆ ಷರತ್ತುಬದ್ಧ ಅವಕಾಶ. ಈಗಾಗಲೇ ಪ್ರಗತಿಯಲ್ಲಿರುವ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ಅವರವರ ಊರುಗಳಿಗೆ ತಲುಪಿಸುವ ಕಾರ್ಯ ಅಬಾಧಿತವಾಗಿ ಮುಂದುವರಿಯಲಿದೆ.

 

ಕೋವಿಡ್ 19 ನಿರ್ವಹಣೆಯ ರಾಷ್ಟ್ರೀಯ ನಿರ್ದೇಶನಗಳು ಈ ಮೊದಲಿನ ಸೂಚನೆಯಂತೇ ಮುಂದುವರಿಯಲಿದೆ‌.
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕಂಟೇನ್ಮೆಂಟ್​ ಜೋನ್​ಗಳಲ್ಲಿ ಕಠಿಣ ನಿಯಮಗಳು ಜಾರಿಗೊಳಿಸಲಾಗಿದೆ. ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. 10 ವರ್ಷದೊಳಗಿನವರು ಮನೆಯಿಂದ ಹೊರಬರುವಂತಿಲ್ಲ.

 

60 ವರ್ಷ ಮೇಲ್ಪಟ್ಟವರೂ ಕೂಡ ಮನೆಯಲ್ಲೇ ಇರಬೇಕು. ಮನೆ ಮನೆಗಳಲ್ಲಿ ಆರೋಗ್ಯ ಸರ್ವೆ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಆರೋಗ್ಯ ಸೇತು ಌಪ್ ಬಳಸುವುದು ಕಡ್ಡಾಯಗೊಳಿಸಲಾಗಿದೆ. ಅಗತ್ಯವಸ್ತು ಸಾಗಣೆ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ವಾಹನಗಳಲ್ಲಿ ಅಂತಾರಾಜ್ಯ ಪ್ರಯಾಣಕ್ಕೆ ಅವಕಾಶ ನೀಡಲಾಗಿದ್ದು, ರಾಜ್ಯದೊಳಗೆ ಸಾರಿಗೆ ವ್ಯವಸ್ಥೆ ಬಗ್ಗೆ ಆಯಾ ರಾಜ್ಯ ಸರ್ಕಾರಗಳೇ ತೀರ್ಮಾನ ಕೈಗೊಳ್ಳಬಹುದು. ಗೂಡ್ಸ್, ಕಾರ್ಗೋ ಟ್ರಕ್​ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ತಿಳಿಸಿದೆ.

 

ಮದ್ಯ ಮಾರಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ.ಮದುವೆ ಸಮಾರಂಭಕ್ಕೆ 50 ಜನರ ಪಾಲ್ಗೊಳ್ಳುವುದು ಹಾಗೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು 20 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.ವೈದ್ಯರು, ವೈದ್ಯಕೀಯ ಸಿಬ್ಬಂದಿ ಸಂಚಾರಕ್ಕೆ ನಿರ್ಬಂಧವಿಲ್ಲ.ವೈದ್ಯರಿಗೆ ಅಂತಾರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶವಿರುತ್ತೆ .ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ತೆರಳಬಹುದು.

 

ಗುಟ್ಕಾ, ಪಾನ್ ಮಸಾಲಾ ಜಗಿಯುವುದಕ್ಕೆ ನಿರ್ಬಂಧ.ಸಾರ್ವಜನಿಕ ಪ್ರದೇಶದಲ್ಲಿ ಉಗುಳಿದರೆ ನಿರ್ದಾಕ್ಷಿಣ್ಯ ಕ್ರಮ.ಸಾರ್ವಜನಿಕ ಸ್ಥಳ, ಸಾರ್ವಜನಿಕ ಸಾರಿಗೆಯಲ್ಲಿ ಅಂತರ.ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ.

 

 

మరింత సమాచారం తెలుసుకోండి: