ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ದೇಶದ ಆರೋಗ್ಯದ ಸಚಿವರಾದ ಹರ್ಷವೆ್ಧನ್ ಆಯ್ಕೆಯಾಗಿರುವುದು ನಮ್ಮ ಭಾರತಕ್ಕೆ ಹೆಮ್ಮೆಯ ವಿಷಯವಾಗಿದೆ ಜೊತೆಗೆ ಈ ಕೋನಾ ಬಿಕ್ಕಟ್ಟಿನ ಸಮಯದಲ್ಲಿ ಈ ಜವಾಬ್ದಾರಿಯುತ ಸ್ಥಾನವನ್ನು ಅಲಂಕರಿಸಿರುವುದು ಡಾ. ಹರ್ಷವರ್ಧನ್ ಅವರ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ.  

 

ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ದೇಶದ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಶುಕ್ರವಾರ ಅಧಿಕಾರ ಸ್ವೀಕಾರಿಸಿದರು. ಕೊರೊನಾ ವೈರಸ್‌ ಎಂಬ ಜಾಗತಿಕ ಬಿಕ್ಕಟ್ಟಿನ ಸಮಯದಲ್ಲಿ ನಾನು ಈ ಕಚೇರಿಗೆ (ವಿಶ್ವ ಆರೋಗ್ಯ ಸಂಸ್ಥೆ) ಪ್ರವೇಶಿಸುತ್ತಿದ್ದೇನೆ ಎಂದು ನನಗೆ ತಿಳಿದಿದೆ. ಮುಂದಿನ 2 ದಶಕಗಳಲ್ಲಿ ಅನೇಕ ಆರೋಗ್ಯ ಸವಾಲುಗಳು ಎದುರಾಗುತ್ತವೆ ಎಂಬುದನ್ನು ನಾವು ಇದೇ ಸಂದರ್ಭದಲ್ಲಿ ಅರ್ಥ ಮಾಡಿಕೊಳ್ಳಬೇಕು. ಈ ಎಲ್ಲ ಸವಾಲುಗಳನ್ನು ನಾವು ನಮ್ಮ ಜವಾಬ್ದಾರಿಗಳನ್ನು ಹಂಚಿಕೊಳ್ಳುವ ಮೂಲಕ ಎದುರಿಸಬೇಕಾಗ ಅಗತ್ಯವಿದೆ ಎಂದು,' ಹರ್ಷವರ್ಧನ್ ತಿಳಿಸಿದರು.

 

34 ಜನ ಸದಸ್ಯರಿರುವ ಡಬ್ಲ್ಯುಎಚ್‌ಒದ ಕಾರ್ಯನಿರ್ವಾಹಕ ಮಂಡಳಿಯ ಅಧ್ಯಕ್ಷರಾಗಿದ್ದ ಜಪಾನ್‌ನ ಡಾ. ಹಿರೋಕಿ ನಕಟಾನಿ ಅವರಿಂದ ಹರ್ಷವರ್ಧನ್ ಅವರು ಅಧಿಕಾರ ಸ್ವೀಕರಿಸಿದರು ಭಾರತದ ಪ್ರತಿನಿಧಿಯನ್ನು ಕಾರ್ಯಕಾರಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಬೇಕು ಎನ್ನುವ ಪ್ರಸ್ತಾವನೆಗೆ 194 ದೇಶಗಳನ್ನೊಳಗೊಂಡ ವಿಶ್ವ ಆರೋಗ್ಯ ಸಭೆಯಲ್ಲಿ ನಿನ್ನೆ (ಮೇ 19) ಸಹಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತವನ್ನು ಮೂರು ವರ್ಷಗಳ ಅವಧಿಗೆ ಮೇ ತಿಂಗಳಿನಿಂದ ಕಾರ್ಯನಿರ್ವಾಹಕ ಮಂಡಳಿಗೆ ಆಯ್ಕೆ ಮಾಡುವುದಾಗಿ ಸರ್ವಾನುಮತದಿಂದ ತೀರ್ಮಾನಿಸಿದ್ದರಿಂದಾಗಿ ಹರ್ಷವರ್ಧನ್ ಅವರು ಈ ಹುದ್ದೆಯನ್ನು ವಹಿಸಿಕೊಳ್ಳುತ್ತಿದ್ದಾರೆ.

 

ಸಾಮಾನ್ಯವಾಗಿ ಪ್ರಾದೇಶಿಕ ಗುಂಪುಗಳ ನಡುವೆ ಅಧ್ಯಕ್ಷ ಹುದ್ದೆಯನ್ನು ಒಂದು ವರ್ಷದ ಅವಧಿಗೆ ರೊಟೇಶನ್ ಮಾದರಿಯಲ್ಲಿ ಆಯ್ಕೆ ಮಾಡಲಾಗುತ್ತದೆ ಮತ್ತು ಕಳೆದ ವರ್ಷ ಆಯ್ಕೆ ಮಾಡಿದಂತೆ ಭಾರತದ ನಾಮನಿರ್ದೇಶಿತರು ಶುಕ್ರವಾರದಿಂದ ಪ್ರಾರಂಭವಾಗುವ ಮೊದಲ ವರ್ಷಕ್ಕೆ ಕಾರ್ಯನಿರ್ವಾಹಕ ಮಂಡಳಿಯ ಅಧ್ಯಕ್ಷರನ್ನಾಗಿಸಲು ತೀರ್ಮಾನಿಸಲಾಗಿತ್ತು.

ಇದು ಪೂರ್ಣ ಸಮಯದ ಹುದ್ದೆ ಅಲ್ಲ ಮತ್ತು ಕಾರ್ಯಕಾರಿ ಮಂಡಳಿಯ ಸಭೆಗಳ ಅಧ್ಯಕ್ಷತೆಯನ್ನು ಸಚಿವರು ವಹಿಸಬೇಕಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

 

ಆರೋಗ್ಯ ಕ್ಷೇತ್ರದಲ್ಲಿ ತಾಂತ್ರಿಕವಾಗಿ ಅರ್ಹತೆ ಪಡೆದ 34 ವ್ಯಕ್ತಿಗಳಿಂದ ಕಾರ್ಯನಿರ್ವಾಹಕ ಮಂಡಳಿಯನ್ನು ರಚಿಸಲಾಗಿದೆ. ಪ್ರತಿಯೊಬ್ಬರೂ ವಿಶ್ವ ಆರೋಗ್ಯ ಸಂಸ್ಥೆಯ ಸಭೆಯಿಂದ ಆಯ್ಕೆಯಾದ ಸದಸ್ಯ ರಾಷ್ಟ್ರದಿಂದ ನೇಮಕಗೊಂಡಿದ್ದಾರೆ. ಸದಸ್ಯ ರಾಷ್ಟ್ರಗಳನ್ನು ಕೂಡ ಮೂರು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗುತ್ತದೆ. ಮಂಡಳಿಯು ವರ್ಷಕ್ಕೆ ಎರಡು ಬಾರಿಯಾದರೂ ಸಭೆ ಸೇರುತ್ತದೆ ಮತ್ತು ಮುಖ್ಯ ಸಭೆಯು ಸಾಮಾನ್ಯವಾಗಿ ಜನವರಿಯಲ್ಲಿ ನಡೆಯುತ್ತದೆ. ಆರೋಗ್ಯ ಸಭೆಯ ನಂತರ ಮೇ ತಿಂಗಳಲ್ಲಿ ಎರಡನೇ ಕಡಿಮೆ ಅವಧಿಯ ಸಭೆ ನಡೆಯುತ್ತದೆ.

 

మరింత సమాచారం తెలుసుకోండి: