ಕೊರೋನ ವೈರಸ್ ಹಿನ್ನಲೆ ವಾರ್ಷಿಕ ಪರೀಕ್ಷೆಯನ್ನೇ ರದ್ದು ಮಾಡಿ ಎಲ್ಲಾ ತರಗತಿಯ ಮಕ್ಕಳಿಗೆ ರಜೆಯನ್ನು ನೀಡಲಾಯಿತು ಆದರೆ ಈಗ ಶಾಲೆಗಳು ಆರಂಭವಾಗುವ ಸಮಯ ಬಂದಿದ್ದರೂ ಕೂಡ ಶಾಲೆಗಳನ್ನು ತೆರೆಯಲು ಇನ್ನೂ ಅನುಮತಿ ದೊರೆಯದ ಕಾರಣ ಆನ್ ಲೈನ್ ಮೂಲಕ ಶಿಕ್ಷಣವನ್ನು ನೀಡಲಾಗುವುದು ಎಂದು ಹೇಳುತ್ತಾ ಅದೆಷ್ಟೋ ಖಾಸಗೀ ಶಾಲೆಗಳು ಪೋಷಕರಿಂದ ಹಣವನ್ನು ವಸೂಲಿ ಮಾಡಲಾಗುತ್ತಿತ್ತು ಇದರ ಜೊತೆಗೆ ಇದಕ್ಕೆ ಪೋಷಕರ ವಿರೋಧವೂ ಹೆಚ್ಚಾಗಿಯೇ ಇತ್ತು. ಇದನ್ನು ಮನಗಂಡ ಸರ್ಕಾರ ಈ ಆನ್  ಲೈನ್ ಶಿಕ್ಷಣವನ್ನು ರದ್ದು ಮಾಡಲಾಗಿದೆ.

 

ಹೌದು ಪೋಷಕರು ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಲ್​ಕೆಜಿ-ಯುಕೆಜಿ ಸೇರಿದಂತೆ 1ರಿಂದ 5ನೇ ತರಗತಿವರೆಗೆ ಆನ್​ಲೈನ್​ ಶಿಕ್ಷಣ​ ರದ್ದುಗೊಳಿಸುವ ಮಹತ್ವದ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಧಿಕಾರಿಗಳು ಹಾಗೂ ಶಿಕ್ಷಣ ತಜ್ಞರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ ನಂತರ ಆನ್ ಲೈನ್ ಶಿಕ್ಷಣ ರದ್ದುಗೊಳಿಸುವ ನಿರ್ಧಾರ ಪ್ರಕಟಿಸಿದ್ದಾರೆ.

 

ಆನ್‍ಲೈನ್ ಶಿಕ್ಷಣದ ಒತ್ತಡದಿಂದ ಮಕ್ಕಳ ಮೆದುಳಿನ ಮೇಲೂ ಅಡ್ಡ ಪರಿಣಾಮವಾಗಲಿದೆ ಎಂದಿದ್ದಾರೆ.ಆನ್​ಲೈನ್ ಶಿಕ್ಷಣದ ಹೆಸರಿನಲ್ಲಿ ಹಣ ವಸೂಲಿ ಮಾಡಲಾಗುತ್ತಿದ್ದು, ಅದಕ್ಕೆ ಕಡಿವಾಣ ಹಾಕಲಾಗಿದೆ. ಉಳಿದಂತೆ ಎಲ್ಲಾ ತರಗತಿಗಳಿಗೆ ಆನ್​ಲೈನ್​ ಶಿಕ್ಷಣ ಮುಂದುವರಿಯಲಿದೆ ಎಂದಿದ್ದಾರೆ. ಯಾವುದೇ ಕಾರಣಕ್ಕೂ ಶುಲ್ಕ ಪಾವತಿಗೆ ಒತ್ತಾಯಿಸಬಾರದು.

 

 ಈಗಾಗಲೇ ನಮಗೆ ದೂರು ಬಂದಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.ತಕ್ಷಣವೇ ಆನ್​ಲೈನ್​ ಶಿಕ್ಷಣ ನಿಲ್ಲಿಸುವಂತೆ ಆದೇಶ ಹೊರಡಿಸಿರುವ ಸುರೇಶ್​ ಕುಮಾರ್​, ಮಕ್ಕಳಿಗೆ ತೊಂದರೆಯಾಗುವ ಸಾಧ್ಯತೆ ಹೆಚ್ಚಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

 

ಆನ್‍ಲೈನ್ ತರಗತಿ ಬಗ್ಗೆ ಚರ್ಚೆ ಆಗುತ್ತಿದೆ. ಈ ವಿಚಾರಕ್ಕೆ ಸಾಕಷ್ಟು ದೂರುಗಳು ಬಂದಿದ್ದು, ಮಕ್ಕಳಿಗೆ ವಿವೇಚನ ರಹಿತವಾಗಿ ತರಗತಿ ಮಾಡಲಾಗುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಜೂನ್ 2ರಂದು ಈ ಕುರಿತು ಸಭೆ ಮಾಡಿದ್ವಿ. ಆದರೆ ಸಭೆ ಅಪೂರ್ಣವಾಗಿತ್ತು. ಇವತ್ತು ಕೂಡ ಸಭೆ ಮಾಡಿದ್ದೇವೆ ಎಂದು ತಿಳಿಸಿದರು.

 

ಎಲ್ಲಾ ಶಾಲೆಗಳು ಎಲ್‌ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳನ್ನು ನಿಲ್ಲಿಸಬೇಕು. ಆನ್‌ಲೈನ್‌ ತರಗತಿ ಹೆಸರಿನಲ್ಲಿ ತೆಗೆದುಕೊಳ್ಳುತ್ತಿರುವ ಶುಲ್ಕವನ್ನು ಕೂಡ ಕೂಡಲೇ ನಿಲ್ಲಿಸಬೇಕು. ಕೊರೋನಾ ವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ವರ್ಷ ಯಾವುದೇ ಶಾಲೆಗಳು ಶುಲ್ಕ ಹೆಚ್ಚಳ ಮಾಡುವಂತಿಲ್ಲ. ಆದರೆ, ಶುಲ್ಕವನ್ನು ಕಡಿತಗೊಳಿಸಲು ಅವಕಾಶವಿದೆ ಎಂದು ಹೇಳಿದರು. ಇದೇ ವೇಳೆ ಶುಲ್ಕಕ್ಕಾಗಿ ಪೋಷಕರನ್ನು ಒತ್ತಾಯಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದರು.

 

 

మరింత సమాచారం తెలుసుకోండి: