ಕೊರೋನಾ ವೈರಸ್ ಇಂದಾಗಿ ಮಕ್ಕಳಿಗೆ ಹರಡದಿರಲಿ ಎಂಬ ಕಾರಣಕ್ಕೆ ಎಸ್ಎಸ್ಎಲ್ಸಿ ಯೊಂದನ್ನು ಹೊರತು ಪಡಿಸಿ ಉಳಿದೆಲ್ಲಾ ತರಗತಿಗಳಿಗೆ ಈ ವರ್ಷದ ಪರೀಕ್ಷೆಯನ್ನು ತೆಗೆದು ಹಾಕಲಾಗಿತ್ತು. ಆದರೆ ಇಂದು ನಿವಾಗಿಯೂ ಕೂಡ ತಲೆ ನೋವಾಗಿ ಕಾಡುತ್ತಿರುವುದು ಎಸ್ಎಸ್ಎಲ್ಸಿ ಪರೀಕ್ಷೆ ಪರೀಕ್ಷೆ ಪಬ್ಲಿಕ್ ಪರೀಕ್ಷೆಯಾಗಿರುವುದರಿಂದ ಇದು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವಂತಹ ಪರೀಕ್ಷೆಯಾಗಿರುವುದರಿಂದ ಈ ಪರೀಕ್ಷೆಯನ್ನು ನೆಡೆಸುವುದು ಅನಿವಾರ್ಯ ಆದರೆ ಇಂದು ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಪೋಷಕರು ವಿದ್ಯಾರ್ಥಿಗಳನ್ನು ಪರೀಕ್ಷೆಯನ್ನು ಬರೆಯಲು ಕಳುಹಿಸಲು ಹಿಂದೇಟು ಹಾಕುತ್ತಿದ್ದ ಪೋಷಕರಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಧೈರ್ಯದ ಮಾತುಗಳನ್ನು ಹೇಳಿದ್ದಾರೆ. .
ಹೌದು ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆ ಬರೆಯುವುದಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಕೈಗೊಂಡಿದು, ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಪರಿಕ್ಷೆಗೆ ಹಾಜರಾಗುವ ಪತ್ರಿಯೊಬ್ಬ ವಿದ್ಯಾರ್ಥಿಯ ಜವಬ್ದಾರಿ ಸರ್ಕಾರದ ಮೇಲೆಯಿದ್ದು, ಪೋಷಕರು ಅಂತಕ ಒಳಗಾಗುವುದು ಬೇಡ. ಅವಶ್ಯಕತೆವಿದ್ದಲ್ಲಿ ಒಬ್ಬ ವಿದ್ಯಾರ್ಥಿ ಪರೀಕ್ಷೆ ಬರೆಯಲು ಒಂದು ಬಸ್ಸಿನ ವ್ಯವಸ್ಥೆ ಮಾಡಲೂ ಸರಕಾರ ಸಿದ್ದ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ಸೋಮವಾರ ಜಿಲ್ಲಾಧಿಕಾರಿಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವ ಸಿದ್ಧತಾ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯಲ್ಲಿ 95 ಪರೀಕ್ಷೆ ಕೇಂದ್ರಗಳಿದ್ದು ಹೆಚ್ಚುವರಿಯಾಗಿ 19 ಕೇಂದ್ರಗಳನ್ನು ಗುರುತಿಸಲಾಗಿದೆ. 1585 ಕೊಠಡಿಗಳಲ್ಲಿ 30835 ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಎಲ್ಲಾ ಸಿದ್ಧತೆಗೊಂಡಿದೆ. ಗಡಿಭಾಗದಿಂದ ಬರುವ 367 ವಿದ್ಯಾರ್ಥಿಗಳಿಗೆ ಬಸ್ಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಜಿಲ್ಲೆಯಲ್ಲಿ ನೋಂದಾಯಿಸಿ ಬೇರೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ 1318 ವಿದ್ಯಾರ್ಥಿಗಳಿಗೆ ಆಯಾ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳಿಗೆ ಭಾರತ್ ಸ್ಕೌಟ್-ಗೈಡ್ ಸಂಸ್ಥೆಯಿಂದ 4 ಸದಸ್ಯರ ಜೊತೆ ಆರೋಗ್ಯ, ಪೊಲೀಸ್ ಇಲಾಖೆಯಿಂದ ತಲಾ ಇಬ್ಬರು ಸಿಬ್ಬಂದಿಯನ್ನು ನೀಡಲಾಗುತ್ತದೆ. ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡುವ ಜವಾಬ್ದಾರಿಯನ್ನು ಆಯಾ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ್, ಮಹನಗರಪಾಲಿಕೆ, ನಗರಸಭೆ. ಪಟ್ಟಣ ಪಂಚಾಯತ್ ಮತ್ತು ಪುರಸಭೆಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಭಾಗಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮೇಯರ್ ದಿವಾಕರ್, ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಯು.ಟಿ. ಖಾದರ್, ಉಮಾನಾಥ ಕೋಟ್ಯಾನ್, ವಿಧಾನಪರಿಷತ್ ಸದಸ್ಯ ಎಸ್. ಎಲ್. ಭೋಜೇ ಗೌಡ ಮತ್ತಿತರರು ಉಪಸ್ಥಿತರಿದರು.
click and follow Indiaherald WhatsApp channel