ದಿನದಿಂದ ದಿನಕ್ಕೆ ಕೊರೋನಾ ವೈರಸ್ ನ ಸೋಂಕು ಹೆಚ್ಚಾಗುತ್ತಿದ್ದು ಈಗಾಗಲೇ ಲಕ್ಷಾಂತರ ಮಂದಿ ಕೊರೋನಾ ವೈರಸ್ ನ ದಾಳಿಗೆ ತುತ್ತಾಗಿ ನರಳುತ್ತಿದ್ದರೆ ಸಾವಿರಾರು ಜನ ಸಾವನ್ನಪ್ಪಿದ್ದಾರೆ. ಈ ಕೊರೋನಾ ವೈರಸ್ ತಡೆಯಲು ಸಾಕಷ್ಟು ಕ್ರಮವನ್ನು ವಹಿಸಿದರೂ ಕೂಡ ಸೋಂಕು ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮನುಷ್ಯನನ್ನು ಸಿಂಹ ಸ್ವಪ್ನವಾಗಿ ಕಾಡುತ್ತಿರುವ ಈ ಕೊರೋನಾ ವೈರಸ್  ತಜ್ಞರ ಪ್ರಕಾರ ಎಂದಿಗೆ ಕಡಿಮೆಯಾಗುತ್ತದೆ ಗೊತ್ತಾ..?  

 

ದೇಶಾದ್ಯಂತ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನೇ ದಿನೇ ಜನತೆಯಲ್ಲಿ ಆತಂಕ ಹೆಚ್ಚುತ್ತಿದೆ. ದೇಶದಲ್ಲಿ ಇನ್ನು ಮೂರು ತಿಂಗಳ ಕಾಲ ಕೊರೊನಾ ಬೆಂಬಿಡದೇ ಕಾಡಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಅಕ್ಟೋಬರ್ ಮಧ್ಯಭಾಗದಲ್ಲಿ ಸೋಂಕಿನ ಪ್ರಮಾಣ ಇಳಿಮುಖವಾಗುವ ಸಾಧ್ಯತೆ ಇದೆ ಎಂದು ಕೆಲವು ತಜ್ಞರು ತಿಳಿಸಿದ್ದಾರೆ.

 

ವಿಶ್ವಕ್ಕೆ ಕೊರೊನಾ ಸೋಂಕು ಕಂಟಕವಾಗಿ ಕಾಡುತ್ತಿದ್ದು, ಜಗತ್ತಿನ ಅತಿದೊಡ್ಡ ರಾಷ್ಟ್ರಗಳೇ ಈ ಮಹಾಮಾರಿ ತಂದೊಡ್ಡಿರುವ ಆತಂಕದಿಂದ ತೀವ್ರ ತತ್ತರಿಸಿ ಹೋಗಿವೆ. ಕೊರೊನಾ ಮಾರಕ ಸೋಂಕಿಗೆ ಜಗತ್ತಿನ ಹಲವೆಡೆ ಔಷಧಿ ಕಂಡುಹಿಡಿಯಲು ಸಂಶೋಧನೆ ನಡೆಯುತ್ತಿದೆ. ಮತ್ತೊಂದೆಡೆ ಸೋಂಕು ಇನ್ನು ಎಷ್ಟು ದಿನ ಮುಂದುವರೆಯಲಿದೆ ಎಂಬ ಕುರಿತಾಗಿಯೂ ತಜ್ಞರ ತಂಡ ಸಂಶೋಧನೆ ನಡೆಸಿದ್ದು, ಭಾರತದಲ್ಲಿ ಈ ಸೋಂಕು ಇನ್ನು ಮೂರು ತಿಂಗಳು ತನ್ನ ಪ್ರತಾಪ ಮುಂದುವರೆಸಲಿದೆ ಎಂದು ತಿಳಿಸಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕು 25 ಸಾವಿರ ಮಂದಿಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇನ್ನು ಮುಂದಿನ ದಿನಗಳಲ್ಲಿ ಇದು ದುಪ್ಪಟ್ಟಾಗುವ ಸಾಧ್ಯತೆ ಇದೆ ಎಂದು ತಜ್ಞರು ಬೆಚ್ಚಿಬೀಳುವ ಮಾಹಿತಿ ನೀಡಿದ್ದಾರೆ.

 

ದೇಶದಲ್ಲಿ ಅಕ್ಟೋಬರ್ ಮಧ್ಯ ಭಾಗದಲ್ಲಿ ಸೋಂಕು ನಿಯಂತ್ರಣಕ್ಕೆ ಬರುವ ಸಾಧ್ಯತೆಯಿದ್ದು, ಈ ವೇಳೆಗೆ ಪ್ರತಿನಿತ್ಯ 20 ರಿಂದ 22 ಸಾವಿರಕ್ಕೆ ಸೋಂಕಿತರ ಸಂಖ್ಯೆ ಇಳಿಕೆಯಾಗಬಹುದು. ಬಳಿಕ ಹಂತ ಹಂತವಾಗಿ ಸೋಂಕಿನ ಸಂಖ್ಯೆ ಇಳಿಕೆಯಾಗಲಿದೆ ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಗುಜರಾತ್, ಉತ್ತರ ಪ್ರದೇಶದಲ್ಲಿ ಕಂಟೈನ್ಮೆಂಟ್ ಝೋನ್‍ಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಮತ್ತು ಸೀಮಿತ ಲಾಕ್‍ಡೌನ್ ಘೋಷಣೆ ಮಾಡಿದ್ದಲ್ಲಿ ಸೋಂಕು ತಡೆ ಸಾಧ್ಯವಾಗಬಹುದು, ಇನ್ನುಳಿದ ರಾಜ್ಯಗಳಲ್ಲಿ ಮತ್ತಷ್ಟು ಕಠಿಣ ಕ್ರಮ ಕೈಗೊಂಡರೆ ಹಂತಹಂತವಾಗಿ ಈ ವರ್ಷಾಂತ್ಯಕ್ಕೆ ಸೋಂಕಿನ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ...

 

మరింత సమాచారం తెలుసుకోండి: