ಕಾಂಗ್ರೆಸ್ ಹಾಗೂ ಜೆಡಿಎಸ್ ನ ಮೈತ್ರಿ ಬಿದ್ದುಹೋದ ನಂತರ ಅಧಿಕಾರವನ್ನು ವಹಿಸಿಕೊಂಡ ಬಿಜೆಪಿ. ಅಧಿಕಾರವನ್ನು ಏರಿದಾಗಿನಿಂದ ಬಿಜೆಪಿ ಸರ್ಕಾರ ಒಂದಲ್ಲಾ ಒಂದು ಸಮಸ್ಯೆಯನ್ನು ಎದುರಿಸುತ್ತಿದೆ. ಕಳೆದ ಬಾರಿ ರಾಜ್ಯ ಭಾರೀ ಪ್ರವಾಹಕ್ಕೆ ತುತ್ತಾದರೆ, ಈ ಬಾರಿ ಕೊರೋನಾ ಕ್ಕೆ ತುತ್ತಾಗಿದೆ. ಇಷ್ಟೆಲ್ಲಾ ಸವಾಲುಗಳಿದ್ದರೂ ಕೂಡ ಬಿಜೆಪಿ ಇಂದಿಗೆ ಅಧಿಕಾರಕ್ಕೆ ಏರಿ ಒಂದು ವರ್ಷವನ್ನು ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಚಿಎಂ ಏನು ಹೇಳಿದ್ದಾರೆ ಗೊತ್ತಾ..?
ರಾಜ್ಯದಲ್ಲಿ ಮಹಾಮಾರಿ ಕೋವಿಡ್19 ಬಂದ ಪರಿಣಾಮ ಆರ್ಥಿಕ ಚಟುವಟಿಕೆಗಳು ಏರುಪೇರಾಗಿ ಅಭಿವೃದ್ಧಿಗೆ ಹಿನ್ನಡೆಯಾಯಿತು ಎಂಬುದನ್ನು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರೇ ಒಪ್ಪಿಕೊಂಡಿದ್ದಾರೆ.
ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಇದೀಗ ಕೋವಿಡ್ ಬಂದಿರುವ ಪರಿಣಾಮ ಆರ್ಥಿಕ ಸ್ಥಿತಿಗತಿ ಹೇಳಿಕೊಳ್ಳುವಂತಿಲ್ಲ. ಒಟ್ಟಾರೆ ನಮ್ಮ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿಯಾಗಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಬಹುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಹಲವು ತಿಂಗಳು ಲಾಕ್‍ಡೌನ್ ಜಾರಿ ಮಾಡಿದ ಪರಿಣಾಮ ನಮ್ಮ ನಿರೀಕ್ಷೆಗಳೆಲ್ಲವೂ ತಲೆಕೆಳಗಾಗದವು. ಕರ್ನಾಟಕವನ್ನು ಇನ್ನಷ್ಟು ಅಭಿವೃದ್ದಿಯತ್ತ ಕೊಂಡಯ್ಯಬೇಕೆಂಬ ಗುರಿ ಇಟ್ಟುಕೊಳ್ಳಲಾಗಿತ್ತು. ಲಾಕ್‍ಡೌನ್‍ನಿಂದಾಗಿ ಭಾರೀ ಹಿನ್ನಡೆಯಾಗಿದೆ. ಆದರೂ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡಯ್ಯಲು ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ನಾವು ರಾಜ್ಯವನ್ನು ಅಭಿವೃದ್ದಿಯತ್ತ ತೆಗೆದುಕೊಂಡು ಕಾರ್ಯಕ್ರಮಗಳನ್ನು ರೂಪಿಸಿದ್ದೆವು. ಆದರೆ ಭಗವಂತನ ಇಚ್ಛೆ ಏನಿತ್ತೋ ಆಗಿದ್ದೇ ಬೇರೆ. ಅದೃಷ್ಟವಶಾತ್ ಈ ಬಾರಿ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುತ್ತಿದ್ದು, ಕೆರೆಕಟ್ಟೆಗಳು, ಡ್ಯಾಂಗಳು ಭರ್ತಿಯಾಗಿವೆ. ಶೇ.90ರಷ್ಟು ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ.
ಇದರಿಂದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ಸಂತಸ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಾದರೂ ರಾಜ್ಯದ ಜನತೆ ನೆಮ್ಮದಿಯಿಂದ ಬದುಕಬೇಕು. ರೈತರಿಗೆ ಉತ್ತಮ ಬೆಳೆ ಬರಲಿ, ಸಕಾಲಕ್ಕೆ ಸರಿಯಾಗಿ ಮಳೆಯಾಗಬೇಕು, ದೀನರು, ದಲಿತರು, ನೇಕಾರರು, ಚಮ್ಮಾರರು ಸೇರಿದಂತೆ ಎಲ್ಲರೂ ನೆಮ್ಮದಿಯಿಂದ ಬದುಕು ಸಾಗಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.
ಇನ್ನು ತಮ್ಮ ಭಾಷಣದಲ್ಲಿ ಬಿಎಸ್‍ವೈ ಅವರು ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯ ಸರ್ಕಾರ ಮಾಡಿರುವ ಸಾಧನೆಗಳ ಪಟ್ಟಿ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಲಿರುವ ಯೋಜನೆಗಳನ್ನು ಜನತೆಯ ಮುಂದಿಟ್ಟರು.
ನಾನು ಅಧಿಕಾರ ಸ್ವೀಕರಿಸಿದಾಗ ಅತಿವೃಷ್ಟಿ ಉಂಟಾಗಿತ್ತು. ಜೊತೆಗೆ ಸಂಪುಟ ಸಹೋದ್ಯೋಗಿಗಳು ಇರಲಿಲ್ಲ. ನಾನು ಯಾವುದಕ್ಕೂ ದೃತಿಗೆಡದೆ ಮನೆಮಠ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದ ಸಂತ್ರಸ್ತರ ಕಣ್ಣೊರೆಸಬೇಕೆಂಬ ಗುರಿ ಇಟ್ಟುಕೊಂಡಿದ್ದೆ. ಈ ಅಗ್ನಿಪರೀಕ್ಷೆಯನ್ನು ನಾನು ಯಶಸ್ವಿಯಾಗಿ ನಿಭಾಯಿಸಿದೆ ಎಂದು ವಿವರಿಸಿದರು.
click and follow Indiaherald WhatsApp channel