ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಪ್ರತಿನಿತ್ಯವೂ ಕೂಡ ಎರಡು ಸಾವಿರ ಕೇಸ್ ಗಳು ದಾಖಲಾಗುತ್ತಿದೆ. ಹಾಗೂ ಅನೇಕ ಮಂದಿ ಸಾವಿಗೀಡಾಗುತ್ತಿದ್ದಾರೆ.  ಇದಕ್ಕೆ ಸರ್ಕಾರ ಸಕಲ ರಿತಿಯಲ್ಲಿ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದರೂ ಕೂಡ ಎಲ್ಲವನ್ನು ಮೀರಿ ಕೊರೋನಾ ವೈರಸ್ ಬೆಳೆಯುತ್ತಿದೆ. ಇದಕ್ಕೆ ಸರ್ಕಾರ ಬೆಂಗಳೂರಿನ ಪ್ರತಿಯೊಂದು ವಾರ್ಡ್ ಗಳಲ್ಲಿಯೂ ಕೂಡ ಕೋವಿಡ್ ವಾರ್ ರೂಮ್ ಅನ್ನು ನಿರ್ಮಾಣವನ್ನು ಆರಂಭಿಸಲಾಗುತ್ತಿದೆ. ಈ ಕುರಿತು ಶಿಕ್ಷಣ ಸಚಿವರು ಏನು ಹೇಳಿದ್ದಾರೆ ಗೊತ್ತಾ..?

 

ಬೆಂಗಳೂರು  ನಗರದಲ್ಲಿ ಇಂದು ಕೊರೋನಾ ವೈರಸ್ ವ್ಯಾಪಕವಾಗಿ ಹರುಡುತ್ತಿರುವದರಿಂದಬೊಮ್ಮನಳ್ಳಿ ವಲಯದ ವ್ಯಾಪ್ತಿಯ ಪ್ರತಿ ವಾರ್ಡ್ ನಲ್ಲಿ ಕೋವಿಡ್ -19 ' ವಾರ್ ರೂಂ' ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು, ಸಕಾಲ ಸಚಿವರು ಮತ್ತು ಬೊಮ್ಮನಹಳ್ಳಿ ವಲಯದ ಉಸ್ತುವಾರಿ ಸಚಿವರು ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು.

 

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೊಮ್ಮನಹಳ್ಳಿ ವಲಯದ ಉತ್ತರಹಳ್ಳಿ, ವಸಂತಪುರ, ಬೊಮ್ಮನಹಳ್ಳಿ ಮತ್ತು ಹೆಚ್, ಎಸ್. ಆರ್. ಲೇಔಟ್ ವಾರ್ಡ್‌ಗಳಲ್ಲಿ ನೂತನವಾಗಿ ಪ್ರಾರಭಿಸಿರುವ ಕೋವಿಡ್ 'ವಾರ್' ರೂಂ ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

 

ನಗರದಲ್ಲಿ ಕೋವಿಡ್-19 ವಿರುದ್ಧ ಬೊಮ್ಮನಹಳ್ಳಿ ವಲಯದ ಕೋವಿಡ್-19 " ವಾರ್" ರೂಂ ಆರಂಭಿಸಲಾಗಿದೆ. ಕೋವಿಡ್ ಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಮಸ್ಯೆಗಳು ಬಂದಾಗ ತಕ್ಷಣವೇ ಸ್ಪಂದಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು. ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರತಿ ವಾರ್ಡ್ ಗಳಲ್ಲಿ ಒಂದೊಂದು ಕೋವಿಡ್-19 ವಾರ್ ರೂಂ ನ್ನು ಆರಂಭಿಸಲಾಗುತ್ತದೆ. ಬೊಮ್ಮನಹಳ್ಳಿ ವಲಯದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕೊರೊನಾ ವೈರಸ್ ನ್ನು ಕಡಿಮೆ ಮಾಡುವುದಲ್ಲದೇ ಯಾರಿಗೆ ಅಗತ್ಯವಿದೆ ಅವರಿಗೆ ತುರ್ತಾಗಿ ಆಸ್ಪತ್ರೆಗೆ ಸೇರಿಸಿ ಸೂಕ್ತವಾದ ಚಿಕಿತ್ಸೆ ನೀಡಬೇಕು ಎಂದರು.

 

ಯಾವುದೇ ಕುಟುಂಬದಲ್ಲಿ ಯಾರೂ ಕೊರೊನಾ ವೈರಸ್ ನಿಂದ ಸಾವನ್ನಪ್ಪಬಾರದು ಎಂಬ ಉದ್ದೇಶದಿಂದ ಕೋವಿಡ್ -19 "ವಾರ್" ರೂಂ ಆರಂಭಿಸಲಾಗಿದೆ. ಪ್ರತಿ ಬೂತ್ ಮಟ್ಟದಲ್ಲಿ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆರು ಮನೆ ಮನೆಗೆ ಹೋಗಿ ಹೋಂ ಐಸೋಲೇಶನ್ ಇರುವವರ ಬಗ್ಗೆ ನಿಗಾ ವಹಿಸಬೇಕು. ಜನರಲ್ಲಿ ಕೊರೊನಾ ವೈರಸ್ ಬಗ್ಗೆ ಅರಿವು ಮೂಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂಧರ್ಭದಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಎಂ. ಕೃಷ್ಣಪ್ಪ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ, ಪಶು ಮತ್ತು ಸಂಗೋಪನಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

 

మరింత సమాచారం తెలుసుకోండి: