ದಿನದಿಂದ ದಿನಕ್ಕೆ ಕೊರೋನಾ ಸೋಂಕು ಬೆಂಗಳೂರಿನಲ್ಲಿ ಹೆಚ್ಚುತ್ತಲೇ ಇದ್ದು , ಇದರಿಂದ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸಮಸ್ಯೆಗಳು ಉಲ್ಬಣವಾಗುತ್ತಲೇ ಇದೆ. ಸಾಕಷ್ಟು ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಉಂಟಾದರೆ ಇನ್ನು ಕೆಲವು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ಸ್ ಗಳು ಹಾಗೂ ಆಕ್ಸಿಜನ್ ಗಳ ಕೊರತೆ ಹೆಚ್ಚುತ್ತಲೇ ಇದೆ. ಅದರಂತೆ ಇಂದು ಕೊರೋನಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆ ಉಂಟಾಗಿ ರೋಗಿಳು ಪರದಾಡುವಂತಾಯಿತು.



ಹೌದು ಆಮ್ಲಜನಕದ ತೀವ್ರ ಕೊರತೆಯಿಂದಾಗಿ ನಗರದ ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯದಿಂದ (ಕಿಮ್ಸ್) 210 ಮಂದಿ ಕೋವಿಡ್‌ ಸೋಂಕಿತರೂ ಸೇರಿದಂತೆ ಸುಮಾರು 350ಕ್ಕೂ ಹೆಚ್ಚು ರೋಗಿಗಳನ್ನು ಸೋಮವಾರ ರಾತ್ರೋರಾತ್ರಿ ವಿಕ್ಟೋರಿಯಾ, ಬೌರಿಂಗ್‌ ಹಾಗೂ ರಾಜೀವ್‌ಗಾಂಧಿ ಎದೆ ರೋಗಗಳ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.



ಕಿಮ್ಸ್‌ ಆಸ್ಪತ್ರೆಯಲ್ಲಿ ಕೋವಿಡ್‌-19 ರೋಗಿಗಳಿಗಾಗಿ ಒಟ್ಟು 410 ಬೆಡ್‌ಗಳನ್ನು ನಿಗದಿಪಡಿಸಲಾಗಿದ್ದು, ಸದ್ಯ ಒಟ್ಟು 210 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಇವರಲ್ಲಿ ಸೋಂಕು ಉಲ್ಬಣಗೊಂಡ 19 ಮಂದಿಗೆ ವೆಂಟಿಲೇಟರ್‌ ಸಹಾಯದೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಜತೆಗೆ ಎಧಿನ್‌ಐವಿ (ನಾನ್‌ ಇನ್ವೇಸಿವ್‌ ವೆಂಟಿಲೇಷನ್‌) ಘಟಕದಲ್ಲಿ27 ಮಂದಿ ಹಾಗೂ ಸಾಮಾನ್ಯ ಐಸಿಯುನಲ್ಲಿ ಒಟ್ಟು 28 ಸೋಂಕಿತರು ಚಿಕಿತ್ಸೆಗೆ ದಾಖಲಾಗಿದ್ದಧಿರು.
 
 

ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಆಮ್ಲಜಕನದ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೊರೋನಾ ಸೋಂಕಿತರೂ ಸೇರಿದಂತೆ ಸುಮಾರು 350 ರೋಗಿಗಳನ್ನು 50ಕ್ಕೂ ಹೆಚ್ಚು ಆ್ಯಂಬುಲೆನ್ಸ್‌ಗಳಲ್ಲಿ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಯಿತು.


 
 ''ಕಿಮ್ಸ್‌ ಆಸ್ಪತ್ರೆಗೆ ಯೂನಿವರ್ಸಲ್‌ ಗ್ಯಾಸ್‌ ಏಜೆನ್ಸಿ ಆಮ್ಲಜನಕದ ಸಿಲಿಂಡರ್‌ಗಳನ್ನು ಸರಬರಾಜು ಮಾಡುತ್ತಿದೆ. ಲಿಕ್ವಿಡ್‌ ಆಮ್ಲಜನಕದ ಕೊರತೆಯಿಂದಾಗಿ ಎರಡು ದಿನಗಳಿಂದ ಸಂಸ್ಥೆಯು ಯಾವುದೇ ಆಸ್ಪತ್ರೆಗೆ ಆಮ್ಲಜನಕ ಪೂರೈಕೆ ಮಾಡಿಲ್ಲ. ಸೋಮವಾರ ರಾತ್ರಿ ವೇಳೆಗೆ ಆಮ್ಲಜನಕದ ಸಿಲಿಂಡರ್‌ಗಳನ್ನು ಪೂರೈಸುವುದಾಗಿ ಆಸ್ಪತ್ರೆಗೆ ಭರವಸೆ ನೀಡಿತ್ತು. ಆದರೆ, ಕೆಲವು ರೋಗಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ರೋಗಿಗಳನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗಿದೆ,'' ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.


 ''ಕಿಮ್ಸ್‌ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆ ಇರುವುದು ನನ್ನ ಗಮನಕ್ಕೆ ಬಂದ ಕೂಡಲೇ ರೋಗಿಗಳನ್ನು ವಿಕ್ಟೋರಿಯಾ, ಬೌರಿಂಗ್‌ ಹಾಗೂ ರಾಜೀವ್‌ಗಾಂಧಿ ಆಸ್ಪತ್ರೆಗೆ ರವಾನಿಸಲು ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳ ಚಿಕಿತ್ಸೆಗೆ 20 ಭಾರಿ ಗಾತ್ರದ ಆಕ್ಸಿಜನ್‌ ಸಿಲಿಂಡರ್‌ಗಳನ್ನು ಕಿಮ್ಸ್‌ಗೆ ಕಳುಹಿಸಲಾಗಿದೆ. ಪ್ರತಿಯೊಬ್ಬ ರೋಗಿಗೂ ಸೂಕ್ತ ಚಿಕಿತ್ಸೆ ದೊರಕಿಸುವುದು ಸರಕಾರದ ಪ್ರಥಮ ಆದ್ಯತೆಯಾಗಿದೆ. ಇದಕ್ಕಾಗಿ ಸರಕಾರ ಖಾಸಗಿ ಆಸ್ಪತ್ರೆಗಳಿಗೆ ಎಲ್ಲಾರೀತಿಯ ಸಹಕಾರ ಮತ್ತು ನೆರವು ನೀಡಲು ಬದ್ಧವಾಗಿದೆ'' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಟ್ವೀಟ್‌

మరింత సమాచారం తెలుసుకోండి: